ಕಾಸರಗೋಡು, ಆ 04 (DaijiworldNews/SM): ಜಿಲ್ಲೆಯ ಕೆಲವು ತಾಲೂಕಿಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ವೆಳ್ಳರಿಕುಂಡು ಮತ್ತು ಹೊಸದುರ್ಗ ತಾಲೂಕುಗಳಲ್ಲಿ ಆಗಸ್ಟ್ 5ರ ಶುಕ್ರವಾರದಂದು ರಜೆ ಘೋಷಣೆ ಮಾಡಲಾಗಿದೆ.
ಭಾರೀ ಮಳೆ ಮುಂದುವರಿಯುತ್ತಿರುವುದರಿಂದ ಕಾಸರಗೋಡು ಜಿಲ್ಲೆಯ ವೆಳ್ಳರಿಕುಂಡು ಮತ್ತು ಹೊಸದುರ್ಗ ತಾಲೂಕುಗಳಲ್ಲಿ ಪದವಿಪೂರ್ವ ಕಾಲೇಜು, ಅಂಗನವಾಡಿ ಕೇಂದ್ರಗಳಿಗೆ ಸೇರಿದಂತೆ ಎಲ್ಲಾ ಶಾಲೆಗಳಿಗೆ ನಾಳೆ(ಆ. 5) ರಜೆ ಘೋಷಿಸಿ ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್ ಆದೇಶ ನೀಡಿದ್ದಾರೆ.
ಇನ್ನು ಈ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವು ಪ್ರದೇಶಗಳಲ್ಲಿ ಮನೆಗೆ ನೀರು ನುಗ್ಗಿರುವ ಪ್ರಸಂಗ ನಡೆದಿದೆ. ಮತ್ತೊಂದೆಡೆ ನೆರೆ ನೀರಿನಿಂದಾಗಿ ಮಹಿಳೆಯೊಬ್ಬರು ಕೊಚ್ಚಿ ಹೋಗಿರುವ ಘಟನೆ ನಡೆದಿದೆ.