ಬೈಂದೂರು, ಆ 05 (DaijiworldNews/MS): ಬೈಂದೂರಿನ ಒತ್ತಿನೆಣೆ ಸಮೀಪದಹೇನ್ಬೇರು ನಿರ್ಜನ ಪ್ರದೇಶದಲ್ಲಿ ಕಾರಿನೊಳಗೆ ಕಾರ್ಕಳದ ಆನಂದ ದೇವಾಡಿಗ (60) ಅವರನ್ನು ಕಾರಿನೊಳಗೆ ಕೂಡಿ ಹಾಕಿ ಸಜೀವ ದಹನ ಮಾಡಿದ ಪ್ರಕರಣದಲ್ಲಿ ಬಂಧಿತರಾಗಿರುವ ನಾಲ್ವರು ಆರೋಪಿಗಳ ನ್ಯಾಯಾಂಗ ಬಂಧನವನ್ನು ಮತ್ತೆ ವಿಸ್ತರಿಸಲಾಗಿದ್ದು, ಆ. 16ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ ಕುಂದಾಪುರದ ಪ್ರಧಾನ ಸಿವಿಲ್ ನ್ಯಾಯಾಲಯ ಆದೇಶ ನೀಡಿದೆ.
ಕೊಲೆ ಪ್ರಕರಣದ ಆರೋಪಿಗಳಾದ ಸದಾನಂದ ಶೇರೆಗಾರ್ (52), ಶಿಲ್ಪಾ ಪೂಜಾರಿ (30) ಮತ್ತು ಅವರಿಗೆ ಸಹಕರಿಸಿದ ಸತೀಶ್ ದೇವಾಡಿಗ (49) ಹಾಗೂ ನಿತಿನ್ ದೇವಾಡಿಗ (35) ಅವರಿಗೆ ಕುಂದಾಪುರದ ಪ್ರಧಾನ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶ ಧನೇಶ್ ಮುಗಳಿ ಅವರು ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದ್ದಾರೆ. ಪ್ರಾಸಿಕ್ಯೂಶನ್ ಪರ ಸಹಾಯಕ ಸರಕಾರಿ ಅಭಿಯೋಜಕಿ ವರ್ಷಶ್ರೀ ವಾದಿಸಿದ್ದರು.
ಹಣದ ವಿಚಾರದಲ್ಲಿ ತನ್ನ ಅವ್ಯವಹಾರ ಮುಚ್ಚಿಹಾಕಲು ತಾನೇ ಮರಣ ಹೊಂದಿದ್ದೇನೆ ಎಂದು ಸಮಾಜವನ್ನು ನಂಬಿಸಲು ಬೇರೊಬ್ಬ ವ್ಯಕ್ತಿಗೆ ಕಂಠಪೂರ್ತಿ ಕುಡಿಸಿ ತನ್ನ ಕಾರಿನಲ್ಲಿ ಕೂರಿಸಿ ಬೆಂಕಿ ಹಚ್ಚಿ ಕೊಂದ ಭೀಬತ್ಸ ಪ್ರಕರಣ ಇದಾಗಿತ್ತು