ಕಾಸರಗೋಡು, ಆ 06 (DaijiworldNews/DB): ಮಂಜೇಶ್ವರ ಗ್ರಾಮ ಪಂಚಾಯತ್ ಅಧಿಕಾರಿಗಳು ಪಂಚಾಯತ್ ವ್ಯಾಪ್ತಿಯ ಅಂಗಡಿ-ಮಳಿಗೆಗಳಿಗೆ ದಾಳಿ ನಡೆಸಿ ಭಾರೀ ಪ್ರಮಾಣದ ನಿಷೇಧಿತ ಪ್ಲಾಸ್ಟಿಕ್ ಉತ್ಪನ್ನಗಳನ್ನು ವಶಪಡಿಸಿಕೊಂಡಿದ್ದಾರೆ.
ಪ್ಲಾಸ್ಟಿಕ್ ಚೀಲ ಹಾಗೂ ಇತರ ಪ್ಲಾಸ್ಟಿಕ್ ಉತ್ಪನ್ನಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಪಂಚಾಯತ್ ಕಾರ್ಯದರ್ಶಿ ಸಜಿ ಥಾಮಸ್, ಸೆಬಾಸ್ಟಿಯನ್ ಥಾಮಸ್, ಜಿಬಿನ್ ಲಾಲ್ ಮತ್ತು ಚರಣ್ ಕುಮಾರ್ ನೇತೃತ್ವದಲ್ಲಿ ತಪಾಸಣೆ ನಡೆಸಲಾಯಿತು.
ಪ್ಲಾಸ್ಟಿಕ್ ಬದಲು ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳುವಂತೆ ಈ ವೇಳೆ ವ್ಯಾಪಾರಿಗಳಿಗೆ ಸಲಹೆ ನೀಡಿದರು. ತಪಾಸಣೆ ಕಟ್ಟುನಿಟ್ಟಾಗಿ ಮುಂದುವರಿಯಲಿದ್ದು, ಒಂದು ಬಾರಿ ಬಳಸುವ ಪ್ಲಾಸ್ಟಿಕ್ ಕಂಡು ಬಂದಲ್ಲಿ ಪರವಾನಗಿ ರದ್ದುಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಪಂಚಾಯತ್ ಕಾರ್ಯದರ್ಶಿ ತಿಳಿಸಿದ್ದಾರೆ.