ಪುತ್ತೂರು, ಆ 07 (DaijiworldNews/HR): ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಕಸ್ಟಡಿಯಲ್ಲಿದ್ದ ಶಫೀಕ್ ಬೆಳ್ಳಾರೆಯನ್ನು ಆ.6 ಸಂಜೆ ಪೊಲೀಸರು ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಈ ವೇಳೆ ನ್ಯಾಯಾಧೀಶರು ಆರೋಪಿಗೆ 15 ದಿನಗಳ ವಿಚಾರಣಾ ಹಂತದ ನ್ಯಾಯಾಂಗ ವಿಧಿಸಿದ್ದಾರೆ.
ಈ ಹಿಂದೆ ನ್ಯಾಯಾಂಗ ಬಂಧನದಲ್ಲಿದ್ದ ಶಫೀಕ್ ಬೆಳ್ಳಾರೆ ಮತ್ತು ಜಾಕೀರ್ ಸವಣೂರು ಅವರಿಬ್ಬರನ್ನು 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ತೆಗೆದುಕೊಂಡಿದ್ದರು.
ಇನ್ನು 5 ದಿನ ಕಳೆದ ಬಳಿಕ ಅವರಿಬ್ಬರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ ಸಂದರ್ಭ ಜಾಕೀರ್ಗೆ ನ್ಯಾಯಾಂಗ ಬಂಧನ ವಿಧಿಸಿ ಶಫೀಕ್ ನನ್ನು ಮತ್ತೆ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದ್ದು, ಇದೀಗ ಶಫೀಕ್ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.