ಪುತ್ತೂರು, ಆ 07 (DaijiworldNews/SM): ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ಳಾರೆ ಠಾಣಾ ಪೊಲೀಸರು ಮತ್ತೆ ಇಬ್ಬರನ್ನು ಬಂಧಿಸಿದ್ದು, ಬಂಧಿತರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ.
ಸುಳ್ಯ ನಾವೂರು ನಿವಾಸಿ ಹಬೀದ್(22) ಹಾಗೂ ಬೆಳ್ಳಾರೆ ಗೌರಿಹೊಳೆ ನಿವಾಸಿ ನೌಫಲ್(28) ಬಂಧಿತರು.
ಪ್ರವೀಣ್ ಹತ್ಯೆಗೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ನಾಲ್ವರನ್ನು ಬಂಧಿಸಿದ್ದು, ಇದೀಗ ಒಟ್ಟು ಬಂಧಿತರ ಸಂಖ್ಯೆ 6ಕ್ಕೆ ಏರಿಕೆಯಾದಂತಾಗಿದೆ. ಜು.26 ರಂದು ರಾತ್ರಿ ಬೆಳ್ಳಾರೆ ಚಿಕನ್ ಸೆಂಟರ್ ಬಳಿ ಪ್ರವೀಣ್ ರವರನ್ನು ಹತ್ಯೆ ಮಾಡಲಾಗಿದ್ದು, ಈ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಮಾತ್ರವಲ್ಲದೇ ರಾಜ್ಯಾದ್ಯಂತ ಭಾರೀ ಸಂಚಲನ ಮೂಡಿಸಿತ್ತು.