ಸುಳ್ಯ, ಆ 09 (DaijiworldNews/MS):ಬಿಜೆಪಿ ಯುವ ಮುಖಂಡ ಪ್ರವೀಣ್ ಕುಮಾರ್ ನೆಟ್ಟಾರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ಳಾರೆ ಪೊಲೀಸರು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ.
ಸುಳ್ಯದ ಜಟ್ಟಿಪಳ್ಳ ನಿವಾಸಿ ಅಬ್ಬಾಸ್ ಎಂಬವರ ಪುತ್ರ ಅಬ್ದುಲ್ ಕಬೀರ್ ಸಿ.ಎ (33) ಎಂಬಾತನನ್ನು ಪೊಲೀಸರು ಬಂಧಿಸಿದ್ದು, ತನಿಖೆ ನಡೆಯುತ್ತಿದೆ.
ಹತ್ಯೆ ಪ್ರಕರಣದ ದಲ್ಲಿ ಭಾಗಿಯಾದವರನ್ನು ಈಗಾಗಲೇ ಗುರುತಿಸಿದ್ದು, ಶೋಧ ಕಾರ್ಯ ಪ್ರಗತಿಯಲ್ಲಿದೆ ಇದುವರೆಗೆ ಒಟ್ಟು 7 ಆರೋಪಿಗಳನ್ನು ಬಂಧಿಸಲಾಗಿದೆ ಶೋಧ ಕಾರ್ಯ ಪ್ರಗತಿಯಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.