ಸುಳ್ಯ, ಆ 09 (DaijiworldNews/SM): ಹೆದ್ದಾರಿಯಲ್ಲಿ ಮಣ್ಣು ಕುಸಿತದ ಪರಿಣಾಮ ಮಡಿಕೇರಿ ಹಾಗೂ ಮಂಗಳೂರು ರಸ್ತೆ ಸಂಚಾರವನ್ನು ಇಂದು ರಾತ್ರಿ 9 ಗಂಟೆಯಿಂದ ನಾಳೆ ಬೆಳಗ್ಗೆ 6.30ರ ತನಕ ಬಂದ್ ಮಾಡಲಾಗಿದೆ. ಎಲ್ಲಾ ತರಹದ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.
ಎಲ್ಲಾ ವಾಹನ ಸಂಚಾರಕ್ಕೆ ಬಂದ್ ಮಾಡಿ ಕೊಡಗು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಸಹಾಯಕ ಇಂಜಿನಿಯರ್ ಅವರಿಂದ ಕೊಡಗು ಜಿಲ್ಲಾಧಿಕಾರಿಗೆ ಮನವಿ ಮಾಡಲಾದ ಹಿನ್ನಲೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ.
ಮದೆನಾಡು ಬಳಿ ಗುಡ್ಡ ಕುಸಿತದ ಆತಂಕ ಎದುರಾಗಿರುವ ಹಿನ್ನಲೆಯಲ್ಲಿ ಪ್ರಯಾಣಿಕರಿಗೆ ಅಪಾಯ ಸಾದ್ಯತೆ ಎದುರಾಗುವ ಹಿನ್ನಲೆಯಲ್ಲಿ ರಸ್ತೆ ಸಂಚಾರ ಬಂದ್ ಮಾಡಿ ಆದೇಶ ಹೊರಡಿಸಲಾಗಿದೆ.