ಮಂಗಳೂರು, ಆ 12 (DaijiworldNews/MS): ಸುರತ್ಕಲ್ ನಲ್ಲಿ ನಡೆದ ಮಹಮ್ಮದ್ ಫಾಝಿಲ್ ಹತ್ಯೆ ಪ್ರಕರಣದ ತನಿಖೆ ಸಮರ್ಪಕವಾಗಿ ನಡೆದಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ.
ಎಲ್ಲಾ ಪ್ರಮುಖ ಆರೋಪಿಗಳನ್ನು ಬಂಧಿಸಲಾಗಿದೆ . ಇನ್ನು ಒಂದು ಅಥವಾ ಎರಡು ಮಂದಿಯನ್ನು ಬಂಧಿಸಲು ಬಾಕಿ ಇದೆ. ಅವರನ್ನು ಕೂಡಾ ಬಂಧಿಸಲಾಗುವುದು. ಪ್ರಕರಣದ ತನಿಖೆ ಬಗ್ಗೆ ಮತ್ತೊಮ್ಮೆ ಪರಿಶೀಲನೆ ನಡೆಸಲಿದ್ದೇನೆ. ಆರೋಪಿಗಳಿಗೆ ಆಶ್ರಯ ನೀಡಿದವರ ಮೇಲೆಯೂ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಡಿಜಿಪಿ ಬುಧವಾರ ಮಂಗಳೂರಿನಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆಯಾದ ಎರಡು ದಿನದಲ್ಲೇ ಕಾಟಿಪಳ್ಳ ಮಂಗಳಪೇಟೆ ನಿವಾಸಿ ಫಾಝಿಲ್ಫಾಝಿಲ್ ಹತ್ಯೆಗೀಡಾಗಿದ್ದರು.