Karavali
ಮಂಗಳೂರು: 76ನೇ ಸ್ವಾತಂತ್ರ್ಯ ದಿನಾಚರಣೆ, ಕನಸಿನ ಮಂಗಳೂರು ತೆರೆದಿಟ್ಟ ಸಚಿವ ಸುನೀಲ್
- Mon, Aug 15 2022 04:43:28 PM
-
ಮಂಗಳೂರು, ಆ 15 (DaijiworldNews/MS): ನಗರದ ನೆಹರೂ ಮೈದಾನದಲ್ಲಿ ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ 76ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಸಡಗರ, ಸಂಭ್ರಮ ಹಾಗೂ ವಿಜೃಂಭಣೆಯಿಂದ ಆಚರಿಸಲಾಯಿತು. ಈ ವೇಳೆ ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ, ತಮ್ಮ ಸಂದೇಶ ಹಾಗೂ ಕನಸಿನ ಮಂಗಳೂರು ವಿಚಾರ ಹಂಚಿಕೊಂಡರು.
ರಾಷ್ಟ್ರ ಪ್ರೇಮ ಮತ್ತು ದೇಶ ಪ್ರೇಮವನ್ನು ಪ್ರತಿಯೊಬ್ಬ ಭಾರತೀಯರಲ್ಲಿ ಬಿತ್ತಲು ಮತ್ತು ಬೆಳೆಸಲು ಇದೇ ಅಗಸ್ಟ್-13 ರಿಂದ ಪ್ರತಿಯೊಂದು ಮನೆಯ ಮೇಲೆ ರಾಷ್ಟ್ರ ಧ್ವಜವನ್ನು ಹಾರಿಸಲು “ಹರ್ ಘರ್ ತಿರಾಂಗ” ಅಭಿಯಾನ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 5 ಲಕ್ಷಕ್ಕೂ ಹೆಚ್ಚು ರಾಷ್ಟ್ರ ಧ್ವಜಗಳನ್ನು ಮನೆಗಳು, ಅಂಗಡಿಗಳು, ಸರ್ಕಾರಿ ಕಟ್ಟಡಗಳು ಇನ್ನಿತರ ಎಲ್ಲಾ ಕಟ್ಟಡಗಳ ಮೇಲೆ ಹಾರಿಸಲಾಗಿದೆ ಎಂದರು
ನಮ್ಮ ಕನಸಿನ ಮಂಗಳೂರು
ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ 750 ಮೆಗಾ ವ್ಯಾಟ್ ವಿದ್ಯುತ್ತಿನ ಬೇಡಿಕೆ ಕಂಡು ಬರುತ್ತಿದ್ದು, ಮುಂದಿನ 5 ರಿಂದ 8 ವರ್ಷಗಳಲ್ಲಿ 250ಕ್ಕಿಂತ ಹೆಚ್ಚು ಮೆಗಾ ವ್ಯಾಟ್ ವಿದ್ಯುತ್ ಬೇಡಿಕೆ ಬರಲಿರುತ್ತದೆ. ಈ ಹಿನ್ನೆಲೆಯಲ್ಲಿ ಅಡಚಣೆ ರಹಿತ ವಿದ್ಯುತ್ತನ್ನು ಸಾರ್ವಜನಿಕರಿಗೆ ನೀಡುವ ಉದ್ದೇಶದಿಂದ ಮಂಗಳೂರಿನಲ್ಲಿ 300 ಕೋಟಿ ರೂ.ಗಳ ವೆಚ್ಚದಲ್ಲಿ 400 ಕಿಲೋ ವ್ಯಾಟ್ (ಕೆವಿ) ವಿದ್ಯುತ್ ಉಪಕೇಂದ್ರವನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ.
ವಿದ್ಯುತ್ ಚಾಲಿತ ವಾಹನಗಳ ಸ್ಟೇಷನ್ಗಳಿಗೆ ಮಂಗಳೂರಿನಲ್ಲಿ ಬೇಡಿಕೆಯಿದ್ದು ಇದರಂತೆ 17 ವಿದ್ಯುತ್ ಚಾಲಿತ ವಾಹನಗಳ ಚಾಜಿರ್ಂಗ್ ಸ್ಟೇಷನ್ಗಳನ್ನು ಸ್ಥಾಪಿಸಲಾಗಿರುತ್ತದೆ ಹಾಗೂ ಮುಂದಿನ ದಿನಗಳಲ್ಲಿ 79 ವಿದ್ಯುತ್ ಚಾಲಿತ ವಾಹನಗಳ ಚಾಜಿರ್ಂಗ್ ಸ್ಟೇಷನ್ಗಳನ್ನು ಸ್ಥಾಪಿಸಲು ಯೋಜನೆ ರೂಪಿಸಲಾಗಿದೆ.
ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ಎಂಆರ್ಎಫ್ ಘಟಕವನ್ನು 2.50 ಕೋಟಿ ರೂ.ಗಳ ವೆಚ್ಚದಲ್ಲಿ ತಂಕ ಎಡಪದವಿನಲ್ಲಿ ಸ್ಥಾಪಿಸಲಾಗುತ್ತಿದೆ ಹಾಗೂ ಪ್ರಸಕ್ತ ವರ್ಷದಲ್ಲಿ ಬೆಳ್ತಂಗಡಿಯ ಉಜಿರೆ, ಪುತ್ತೂರಿನ ಕೆದಂಬಾಡಿ, ಬಂಟ್ವಾಳದ ನರಿಕೊಂಬುವಿನಲ್ಲಿ 3 ಹೆಚ್ಚುವರಿ ಎಂಆರ್ಎಫ್ ಘಟಕಗಳನ್ನು ನಿರ್ಮಿಸಲು ಅಂದಾಜು 913 ಲಕ್ಷ ರೂ.ಗಳ ವೆಚ್ಚದಲ್ಲಿ ಯೋಜನೆ ರೂಪಿಸಲಾಗಿದೆ.
ಶೌಚಾಲಯಗಳಲ್ಲಿ ಉತ್ಪತ್ತಿಯಾಗುವ ಕಪ್ಪುನೀರನ್ನು ವೈಜ್ಞಾನಿಕವಾಗಿ ನಿರ್ವಹಿಸುವ ಸಲುವಾಗಿ ಬಂಟ್ವಾಳ ಗೋಳ್ತಮಜಲು, ಬೆಳ್ತಂಗಡಿ ಉಜಿರೆಯಲ್ಲಿ 1.57 ಕೋಟಿ ರೂ.ಗಳ ವೆಚ್ಚದಲ್ಲಿ ಮಲತ್ಯಾಜ್ಯ ನಿರ್ವಹಣಾ ಘಟಕಗಳನ್ನು ನಿರ್ಮಿಸಲಾಗುತ್ತಿದೆ.
ಅಮೃತ ಸರೋವರ ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆಯಿಂದ 75 ಕೆರೆಗಳನ್ನು ಆಯ್ಕೆ ಮಾಡಿಕೊಂಡಿದ್ದು, ಅದರಲ್ಲಿ 15 ಕೆರೆಗಳ ಅಭಿವೃದ್ಧಿಯನ್ನು ಪೂರ್ಣಗೊಳಿಸಲಾಗಿರುತ್ತದೆ. ಅದೇ ರೀತಿ ಅಮೃತ ಉದ್ಯಾನವನ ಕಾರ್ಯಕ್ರಮವನ್ನು ಸಹ ಯಶಸ್ವಿಯಾಗಿ ಅನುಷ್ಟಾನಗೊಳಿಸಲಾಗಿರುತ್ತದೆ.ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಜಲಜೀವನ್ ವಿಷನ್ ಅನ್ನು ಒಟ್ಟು 3 ಹಂತಗಳಲ್ಲಿ 700 ಕಾಮಗಾರಿಗಳನ್ನು 518 ಕೋಟಿ ರೂ.ಗಳ ವೆಚ್ಚದಲ್ಲಿ ಅನುಷ್ಟಾನಗೊಳಿಸಲಾಗುತ್ತಿದೆ. ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಲ್ಲಿ ಒಟ್ಟು ಹೊಸ 7 ಯೋಜನೆಗಳನ್ನು 487.83 ಕೋಟಿ ರೂ.ಗಳ ಮೊತ್ತದಲ್ಲಿ ಕೈಗೆತ್ತಿಕೊಳ್ಳಲಾಗಿದ್ದು, ಅದರಲ್ಲಿ 2 ಯೋಜನೆಗಳು ಅನುಷ್ಟಾನ ಹಂತದಲ್ಲಿವೆ.
ಜಿಲ್ಲೆಗೊಂದು ಗೋಶಾಲೆ ಸ್ಥಾಪನೆ ಯೋಜನೆಯಡಿ ಸರ್ಕಾರದಿಂದ 47 ಲಕ್ಷ ರೂ.ಗಳ ಅನುದಾನ ಬಿಡುಗಡೆಗೊಂಡಿದ್ದು, ಕಡಬ ತಾಲೂಕಿನ ರಾಮಕುಂಜದಲ್ಲಿ ಸೂಕ್ತ ಜಾಗವನ್ನು ಸಹ ಗುರುತಿಸಲಾಗಿರುತ್ತದೆ.
ಮುಖ್ಯಮಂತ್ರಿಗಳು ಪ್ರಸಕ್ತ ಸಾಲಿನಲ್ಲಿ ಆಯವ್ಯಯದಲ್ಲಿ ಘೋಷಿಸಲಾದಂತೆ ಜಿಲ್ಲೆಯ 3 ಕಡೆ ಶಿಶುಪಾಲನ ಕೇಂದ್ರಗಳನ್ನು ಸ್ಥಾಪಿಸಲಾಗಿರುತ್ತದೆ. ಉದ್ಯೋಗಸ್ಥ ಮಹಿಳೆಯರ ಅನುಕೂಲಕ್ಕಾಗಿ ಜಿಲ್ಲೆಯಲ್ಲಿ 2 ಕಡೆ ಉದ್ಯೋಗಸ್ಥ ಮಹಿಳೆಯರ ವಸತಿ ಗೃಹವನ್ನು ಪ್ರಾರಂಭಿಸಲಾಗಿರುತ್ತದೆ.ಹಿಂದುಳದ ವರ್ಗಗಳ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಉದ್ದೇಶಕ್ಕೆ ಅನುಕೂಲವಾಗುವಂತೆ ಜಿಲ್ಲೆಯಲ್ಲಿ ಬಂಟ್ವಾಳ ತಾಲೂಕು ಪುಂಜಾಲಕಟ್ಟೆಯಲ್ಲಿ 25 ಕೋಟಿ ರೂ.ಗಳ ವೆಚ್ಚದಲ್ಲಿ ನಾರಾಯಣಗುರು ವಸತಿ ಶಾಲೆಯನ್ನು ಸ್ಥಾಪಿಸಲಾಗುತ್ತಿದೆ.
ಸೇನೆ ಮತ್ತು ಪೋಲೀಸ್ ಸೇವೆಗೆ ಸೇರುವ ಯುವಕ, ಯುವತಿಯರಿಗೆ ಸೂಕ್ತ ತರಬೇತಿ ನೀಡಲು ವೀರರಾಣಿ ಅಬ್ಬಕ್ಕ ಸೇನಾ ಆಯ್ಕೆ ಪೂರ್ವ ತರಬೇತಿ ಶಾಲೆಯನ್ನು ಮಂಗಳೂರಿನಲ್ಲಿ ಪ್ರಾರಂಭಿಸಲಾಗುತ್ತಿದೆ. 6 ತಿಂಗಳ ಕಾಲ ಸೇನಾ ಆಯ್ಕೆ ಪೂರ್ವ ತರಬೇತಿ ನೀಡಲು ಚಿಂತಿಸಲಾಗಿದೆ.ರಾಜ್ಯ ಸರ್ಕಾರದಿಂದ ದಕ್ಷಿಣ ಕನ್ನಡ ಜಿಲ್ಲೆಗೆ 8000 ಹೊಸ ಮನೆಗಳ ಗುರಿಯನ್ನು ಮಂಜೂರು ಮಾಡಿದ್ದು ಈಗಾಗಲೇ ಫಲಾನುಭವಿಗಳ ಆಯ್ಕೆ ಪೂರ್ಣಗೊಂಡಿರುತ್ತದೆ. ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ 3621 ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿರುತ್ತದೆ.
2022-23ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದಂತೆ ಪರಿಶಿಷ್ಟ ಪಂಗಡ, ಹಿಂದುಳಿದ ಅಲ್ಪ ಸಂಖ್ಯಾತ ವರ್ಗದ ಮಕ್ಕಳಿಗೆ ವಿದ್ಯಾಭ್ಯಾಸಕ್ಕಾಗಿ ಅನುಕೂಲವಾಗುವಂತೆ ದೀನ್ ದಯಾಳ್ ಉಪಾಧ್ಯಾಯ ಸೌಹಾರ್ದ ವಿದ್ಯಾರ್ಥಿ ನಿಲಯ ಸ್ಥಾಪಿಸಲು ಕ್ರಮವಹಿಸಲಾಗುತ್ತಿದೆ.
ಆಕರ್ಷಣೀಯ ಮಂಗಳೂರು
ಯಕ್ಷಗಾನವನ್ನು ಪ್ರೋತ್ಸಾಹಿಸಲು ಈ ವರ್ಷ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಕ್ಷಗಾನ ಸಮ್ಮೇಳನ ಆಯೋಜಿಸಲು ಚಿಂತಿಸಲಾಗಿದೆ, ಅದಕ್ಕಾಗಿ 2 ಕೋಟಿ ರೂ.ಗಳ ಅನುದಾನವನ್ನು ಮೀಸಲಿಡಲಾಗಿದೆ. ಇದರಂತೆ ಯಕ್ಷಗಾನ ಸಮ್ಮೇಳನವನ್ನು ಆಯೋಜಿಸಲಾಗುವುದು.ಪ್ರವಾಸಿಸ್ನೇಹಿ ಜಿಲ್ಲೆಯನ್ನಾಗಿಸಲು ಅನೇಕ ರೀತಿಯಲ್ಲಿ ಅಭಿವೃದ್ಧಿ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗಿದೆ. ಪ್ರಮುಖ ಬೀಚ್ಗಳನ್ನು ಅಭಿವೃದ್ಧಿಗೊಳಿಸಿ ಪ್ರವಾಸಿಗರನ್ನು ಸೆಳೆಯುವಂತೆ ಮಾಡಲು ಕ್ರಮವಹಿಸಲಾಗುತ್ತಿದೆ ಹಾಗೂ ವಿವಿಧ ಧಾರ್ಮಿಕ ಕ್ಷೇತ್ರಗಳನ್ನು ಸಹ ಪ್ರವಾಸೋದ್ಯಮ ಇಲಾಖೆ ವತಿಯಿಂದ ಮತ್ತು ಹಿಂದೂ ಧಾರ್ಮಿಕ ದತ್ತಿ ಇಲಾಖೆ ವತಿಯಿಂದ ಅಭಿವೃದ್ಧಿಗೊಳಿಸಲಾಗುತ್ತಿದೆ. ಪ್ರವಾಸೋದ್ಯಮ ಇಲಾಖೆಯಿಂದ ಮೂಲಭೂತ ಸೌಕರ್ಯ ಅಭಿವೃದ್ಧಿ ಯೋಜನೆಗಳಗಾಗಿ 23.6 ಕೋಟಿ ರೂ.ಗಳ ವೆಚ್ಚದಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ.
ಕೇಂದ್ರ ಸರ್ಕಾರದಿಂದ ಬೀಮ್ಸ್ ಕಾರ್ಯಕ್ರಮದಡಿ ಬ್ಲೂಫ್ಲಾಗ್ ಬೀಚ್ ಅಭಿವೃದ್ಧಿ ಪಡಿಸಲು ದೇಶಾದ್ಯಂತ 3 ಸಮುದ್ರ ತೀರಗಳನ್ನು ಆಯ್ಕೆ ಮಾಡಲಾಗಿದ್ದು, ಜಿಲ್ಲೆಯ ತಣ್ಣೀರುಬಾವಿ ಕಡಲ ತೀರವು ಆಯ್ಕೆಗೊಂಡಿರುವುದು ಸಂತಸದ ವಿಷಯ. ಇದರಂತೆ ಈ ಬೀಚನ್ನು ಅಭಿವೃದ್ಧಿಪಡಿಸಲಾಗುವುದು.
ದಕ್ಷಿಣ ಕನ್ನಡ ಜಿಲ್ಲೆಯ ಸಾಂಪ್ರದಾಯಕ ಕ್ರೀಡೆ ಕಂಬಳಕ್ಕೆ ಪ್ರೋತ್ಸಾಹ ನೀಡುವ ನೆಲೆಯಲ್ಲಿ ಸರ್ಕಾರದಿಂದ ವಿಶೇಷ ಅನುದಾನ ಬಿಡುಗಡೆ ಮಾಡಿ ಕಂಬಳ ಕ್ರೀಡೆಯನ್ನು ಪ್ರೋತ್ಸಾಹಿಸಲಾಗುವುದು.
ಅಭಿವೃಧ್ಧಿ ಪಥದಲ್ಲಿ ಮಂಗಳೂರು:
ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರದಿಂದ ಅಮೃತ ಯೋಜನೆಗಳನ್ನು ಜಾರಿಗೆ ತಂದಿದ್ದು, ಇವುಗಳ ಅನುಷ್ಟಾನವನ್ನು ಸಹ ಯಶಸ್ವಿಯಾಗಿ ಮಾಡಲಾಗಿರುತ್ತದೆ. ಅಮೃತ ಗ್ರಾಮ ಪಂಚಾಯತ್ ಯೋಜನೆಯಲ್ಲಿ ಒಟ್ಟು 54 ಗ್ರಾಮ ಪಂಚಾಯತ್ಗಳನ್ನು 2 ಹಂತದಲ್ಲಿ ಅನುಷ್ಟಾನಗೊಳಿಸಲಾಗುತ್ತಿದ್ದು, ಮೊದಲ ಹಂತದ 27 ಗ್ರಾಮ ಪಂಚಾಯತ್ಗಳಗೆ ತಲಾ 25 ಲಕ್ಷ ರೂ.ಗಳಂತೆ ಅಮೃತ ಗ್ರಾಮ ಪಂಚಾಯತ್ಗಳಿಗೆ ಈಗಾಗಲೇ ಬಿಡುಗಡೆಗೊಳಿಸಲಾಗಿದೆ. ಅಮೃತ ಗ್ರಾಮೀಣ ವಸತಿ ಯೋಜನೆಯಲ್ಲಿ ವಸತಿ ರಹಿತರಿಗೆ ಮತ್ತು ನಿವೇಶನ ರಹಿತರಿಗೆ ನಿವೇಶನ ಮತ್ತು ವಸತಿ ನೀಡುವ ಯೋಜನೆಯನ್ನು ಅನುಷ್ಟಾನಗೊಳಸಲಾಗಿರುತ್ತದೆ. ರಾಜ್ಯ ಸರ್ಕಾರದಿಂದ ದಕ್ಷಿಣ ಕನ್ನಡ ಜಿಲ್ಲೆಗೆ 8000 ಹೊಸ ಮನೆಗಳ ಗುರಿಯನ್ನು ಮಂಜೂರು ಮಾಡಲಾಗಿದ್ದು, ಈಗಾಗಲೇ ಫಲಾನುಭವಿಗಳ ಆಯ್ಕೆ ಪೂರ್ಣಗೊಂಡಿದೆ.ಅಮೃತ ಅಂಗನವಾಡಿ ಯೋಜನೆಯಡಿ 25 ಅಂಗನವಾಡಿಗಳಿಗೆ 25 ಲಕ್ಷ ರೂ.ಗಳ ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ಅಮೃತ ಆರೋಗ್ಯ ಯೋಜನೆಯಡಿ 25 ಪ್ರಾಥಮಿಕ ಆರೋಗ್ಯ ಕೇಂದ್ರಗಳ ಉನ್ನತೀಕರಣಕ್ಕಾಗಿ 5 ಕೋಟಿ ರೂ.ಗಳ ಅನುದಾನವನ್ನು ಬಿಡುಗಡೆಗೊಳಿಸಲಾಗಿರುತ್ತದೆ ಹಾಗೂ ಅಮೃತ ಶಾಲೆ ಯೋಜನೆಯಡಿ 27 ಸರ್ಕಾರಿ ಶಾಲೆಗಳ ಸಮಗ್ರ ಅಭಿವೃದ್ಧಿಗೆ 27 ಲಕ್ಷ ರೂ.ಗಳ ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ಅಮೃತ ಸ್ವಸಹಾಯ ಯೋಜನೆಯಡಿ 185 ಸ್ವಸಹಾಯ ಗುಂಪುಗಳಿಗೆ 1.85 ಕೋಟಿ ರೂ.ಗಳ ಅನುದಾನವನ್ನು ಈಗಾಗಲೇ ಬಿಡುಗಡೆಗೊಳಿಸಲಾಗಿರುತ್ತದೆ. ಅಮೃತ ಸರೋವರ ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆಯಿಂದ 75 ಕೆರೆಗಳನ್ನು ಆಯ್ಕೆ ಮಾಡಿಕೊಂಡಿದ್ದು, ಇದರಲ್ಲಿ 15 ಕರೆಗಳ ಅಭಿವೃದ್ಧಿಯನ್ನು ಪೂರ್ಣಗೊಳಿಸಲಾಗಿರುತ್ತದೆ. ಅದೇ ರೀತಿ ಅಮೃತ ಉದ್ಯಾನವನ ಕಾರ್ಯಕ್ರಮವನ್ನು ಸಹ ಯಶಸ್ವಿಯಾಗಿ ಅನುμÁ್ಠನಗೊಳಿಸಲಾಗಿರುತ್ತದೆ.
ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಸುಮಾರು 18 ಲಕ್ಷ ಮಾನವ ದಿನಗಳನ್ನು ಸೃಜಿಸುವ ಗುರಿಯನ್ನು ಹೊಂದಿದ್ದು, 90.94 ಕೋಟಿ ರೂ.ಗಳ ಆರ್ಥಿಕ ಗುರಿ ನಿಗದಿಪಡಿಸಲಾಗಿದೆ. ಇದರಲ್ಲಿ ಈವರೆಗೆ ಈಗಾಗಲೇ ಸುಮಾರು. 31.50 ಕೋಟಿ ರೂ.ಗಳ ಅನುದಾನ ಬಿಡುಗಡೆಯಾಗಿರುತ್ತದೆ, ಇದೇ ರೀತಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಗ್ರಾಮ ಪಂಚಾಯತ್ಗೆ ಒಂದು ಉದ್ಯಾನವನ, ಗ್ರಾಮ ಪಂಚಾಯತ್ಗೆ ಒಂದು ಕ್ರೀಡಾಂಗಣ ಮತ್ತು ನಮ್ಮ ಹೊಲ ನಮ್ಮ ರಸ್ತೆ ಯೋಜನೆಗಳನ್ನು ಅನುಷ್ಟಾನಗೊಳಿಸಲಾಗುತ್ತಿದೆ.
ಗ್ರಾಮೀಣ ರಸ್ತೆಗಳ ದುರಸ್ತಿ ಮತ್ತು ನಿರ್ವಹಣೆಗಾಗಿ ಮುಖ್ಯಮಂತ್ರಿ ಗ್ರಾಮೀಣ ರಸ್ತೆ ಅಭಿವೃದ್ಧಿ ಯೋಜನೆಯಡಿ ಪ್ರಸಕ್ತ ಸಾಲಿಗೆ 5.77 ಕೋಟಿ ರೂ.ಗಳ ಅನುದಾನ ಹಂಚಿಕೆ ಮಾಡಲಾಗಿರುತ್ತದೆ ಹಾಗೂ ವಿಶೇಷ ಅನುದಾನದಡಿ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗಾಗಿ ದಕ್ಷಿಣ ಕನ್ನಡ ಜಿಲ್ಲೆಗೆ 148 ಕೋಟಿ ರೂ.ಗಳ ಅನುದಾನ ನಿಗದಿ ಪಡಿಸಲಾಗಿರುತ್ತದೆ.
ಪ್ರಸಕ್ತ ಸಾಲಿನ ಜೂನ್, ಜುಲೈ, ಆಗಸ್ಟ್ನಲ್ಲಿ ಸುರಿದ ಭಾರಿ ಮಳೆಯಿಂದ ಕೆಲವು ಪ್ರದೇಶದಲ್ಲ ದೊಡ್ಡ ಪ್ರಮಾಣದ ಹಾನಿ ಉಂಟಾಗಿರುತ್ತದೆ. ಮಳೆ ಮತ್ತು ಭೂ ಕುಸಿತದಿಂದ ಮೃತಪಟ್ಟ ವ್ಯಕ್ತಿಗಳ ಕುಂಟುಂಬದವರಿಗೆ ಈಗಾಗಲೇ ತಲಾ 5 ಲಕ್ಷ ರೂ.ಗಳ ಪರಿಹಾರವನ್ನು ಸಹ ಬಿಡುಗಡೆಗೊಳಿಸಲಾಗಿದೆ ಹಾಗೂ ಪ್ರಸಕ್ತ ಸಾಲಿನಲ್ಲಿ 158 ಮನೆಗಳು ಪೂರ್ಣ ಪ್ರಮಾಣದಲ್ಲಿ, ಸುಮಾರು ಹಾನಿಯಾಗಿದ್ದು. ಹಾನಿಗೊಂಡ 563 ಮನೆಗಳಗೆ ಮನೆಗಳು ಭಾಗಶಃ ಪ್ರಮಾಣದಲ್ಲಿ ಅನುದಾನ ಬಿಡುಗಡೆಗೊಳಸಲು ಕ್ರಮವಹಿಸಲಾಗಿದೆ. ಪೂರ್ಣ ಹಾನಿಗೊಂಡ ಮನೆಗಳಿಗೆ 5 ಲಕ್ಷ ರೂ.ಗಳ ಅನುದಾನ ಮತ್ತು ಭಾಗಶಃ ಮನೆಗಳಗೆ ರೂ. 3ಲಕ್ಷ ಪರಿಹಾರ ನೀಡಲು ಈಗಾಗಲೇ ಆದೇಶ ಹೊರಡಿಸಲಾಗಿದೆ.
ಪ್ರಾಕೃತಿಕ ವಿಕೋಪ ನಿರ್ವಹಣಾ ಕಾರ್ಯಕ್ರಮದಡಿ ಮೂಲಭೂತ ಸೌಕರ್ಯಕ್ಕೆ ಹಾಗೂ ತುರ್ತು ಪರಿಹಾರಕ್ಕಾಗಿ ಜಿಲ್ಲೆಗೆ ಸರ್ಕಾರದಿಂದ ಈಗಾಗಲೇ 25 ಕೋಟಿ ರೂ.ಗಳ ಅನುದಾನ ಬಿಡುಗಡೆ ಮಾಡಲಾಗಿರುತ್ತದೆ.
ಮಳೆಯಿಂದ ರಸ್ತೆಗಳು ಹಾನಿಯಾಗಿದ್ದು, ಎಲ್ಲಾ ರಸ್ತೆಗಳನ್ನು ಪುನಃಶ್ಚೇತನ ಮತ್ತು ಪುನರ್ ನಿರ್ಮಾಣ ಮಾಡುವ ಕುರಿತು ಯೋಜನೆಯನ್ನು ತಯಾರಿಸಿದ್ದು, ಇದರಂತೆ ಸುಮಾರು 900 ಕಿ.ಮೀ ಗ್ರಾಮೀಣ ರಸ್ತೆಗಳ ಪುನರ್ ನಿರ್ಮಾಣಕ್ಕಾಗಿ 110 ಕೋಟಿ ರೂ.ಗಳ ಮೊತ್ತಕ್ಕೆ ಕ್ರಿಯಾ ಯೋಜನೆ ತಯಾರಿಸಲಾಗಿರುತ್ತದೆ. ಸುಮಾರು 35ಕ್ಕೂ ಹೆಚ್ಚು ಸೇತುವೆಗಳು ಹಾನಿಗೊಂಡಿದ್ದು, ಈ ಸೇತುವೆಗಳ ಪುನರ್ ನಿರ್ಮಾಣಕ್ಕೂ ಸಹ ವಿಶೇಷ ಅನುದಾನವನ್ನು ಬಿಡುಗಡೆಗೊಳಿಸಲಾಗುತ್ತಿದೆ. ಆದಾಗ್ಯೂ ಸಂಪರ್ಕ ಕಡಿತಗೊಂಡಿರುವ ಸೇತುವೆಗಳನ್ನು ತುರ್ತಾಗಿ ಮನಶ್ವೇತನಗೊಳಿಸಲು ಕ್ರಮವಹಿಸಲಾಗುತ್ತಿದೆ. ಮಳೆಯಿಂದ ಸುಮಾರು 183 ಕ್ಕೂ ಹೆಚ್ಚು ಶಾಲೆಗಳು ಹಾನಿಯಾಗಿದ್ದು, ಆ ಶಾಲೆಗಳ ದುರಸ್ತಿಗಾಗಿ ಕೂಡಲೇ ತಲಾ 2 ಲಕ್ಷ ರೂ.ಗಳ ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ಪ್ರವಾಹವನ್ನು ದಕ್ಷಿಣ ಕನ್ನಡ ಜಿಲ್ಲಾಡಳಿತ, ಎಲ್ಲಾ ಜನಪ್ರತಿನಿಧಿಗಳ, ಎಲ್ಲಾ ಶಾಸಕರ ಹಾಗೂ ಸಾರ್ವಜನಿಕರ ಸಹಕಾರದಿಂದ ಯಶಸ್ವಿಯಾಗಿ ನಿಭಾಯಿಸಲಾಗಿರುತ್ತದೆ ಮತ್ತು ಅನೇಕ ರೀತಿಯಲ್ಲಿ ಅನಾಹುತಗಳನ್ನು ತಪ್ಪಿಸಲು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಆದುದರಿಂದ ಜಿಲ್ಲಾಡಳಿತಕ್ಕೆ ಹಾಗೂ ಎಲ್ಲಾ ಜನಪ್ರತಿನಿಧಿಗಳಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.
100 ವರ್ಷ ಪೂರೈಸಿರುವ ಜಿಲ್ಲೆಯ 8 ಸರ್ಕಾರಿ ಶಾಲೆಗಳ ಅಭಿವೃದ್ಧಿಗಾಗಿ 1.32 ಲಕ್ಷ ರೂ.ಗಳ ಅನುದಾನ ಬಿಡುಗಡೆ ಮಾಡಲಾಗಿರುತ್ತದೆ. ಹಾಗೂ ಪ್ರಸಕ್ತ ಸಾಲಿನಲ್ಲಿ ಜಿಲ್ಲಾ ಪಂಚಾಯತ್ ಅಭಿವೃದ್ಧಿ ಅನುದಾನದಿಂದ 45 ಶಾಲೆಗಳಲ್ಲಿ ಸ್ಮಾರ್ಟ್ ಕ್ಲಾಸ್ ಹಾಗೂ ಇ-ಗ್ರಂಥಾಲಯ ರಚಿಸಲು 125 ಲಕ್ಷ ರೂ.ಗಳ ಅನುದಾನ ಬಿಡುಗಡೆಗೊಳಿಸಲಾಗಿರುತ್ತದೆ.
ದಕ್ಷಿಣ ಕನ್ನಡ ಜಿಲ್ಲೆಯನ್ನು ಕೃಷಿಸ್ನೇಹಿ ಜಿಲ್ಲೆಯನ್ನಾಗಿಸಲು ಕೃಷಿ ಇಲಾಖೆಯಿಂದ ಹಲವಾರು ರೀತಿಯ ಯೋಜನೆಗಳನ್ನು ಅನುಷ್ಟಾನಗೊಳಿಸಲಾಗಿದ್ದು, ಕೃಷಿ ಮತ್ತು ತೋಟಗಾರಿಕೆ ಇಲಾಖಾ ವತಿಯಿಂದ ಪ್ರಸಕ್ತ ಸಾಲಿನ ಮಳೆಯಿಂದಾಗಿ ಹಾನಿಯಾದ ಬೆಳೆಗಳಿಗೆ ಪರಿಹಾರ ನೀಡಲು ಕ್ರಮವಹಿಸಲಾಗುತ್ತಿದೆ. ಕೃಷಿ ಇಲಾಖೆಯಿಂದ ಈಗಾಗಲೇ ಸುಮಾರು 7000 ಹೆಕ್ಟೇರ್ ಬಿತ್ತನೆಯಾಗಿರುತ್ತದೆ. ರೈತ ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ಪೆÇ್ರೀತ್ಸಾಹ ನೀಡುವ ದೃಷ್ಠಿಯಿಂದ ಮುಖ್ಯಮಂತ್ರಿ ವಿದ್ಯಾನಿಧಿ ಯೋಜನೆಯನ್ನು ಸರ್ಕಾರ ಜಾರಿಗೊಳಿಸಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 25,000 ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆದಿರುತ್ತಾರೆ. ಇದಕ್ಕಾಗಿ ರೈತ ಮಕ್ಕಳ ಖಾತೆಗೆ ನೇರವಾಗಿ ಒಟ್ಟಾರೆ ಸುಮಾರು 795 ಕೋಟಿ ರೂ.ಗಳ ವಿದ್ಯಾರ್ಥಿ ವೇತವನ್ನು ಪಾವತಿಸಲಾಗಿರುತ್ತದೆ.
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ಜಿಲ್ಲೆಯಲ್ಲಿ 1,54,000 ರೈತರಿಗೆ ಒಟ್ಟು 345 ಕೋಟಿ ರೂ.ಗಳ ಅನುದಾನವನ್ನು ರೈತರ ಖಾತೆಗೆ ಬಿಡುಗಡೆ ಮಾಡಲಾಗಿರುತ್ತದೆ. ಅದೇ ರೀತಿ ಪ್ರಧಾನ ಮಂತ್ರಿ ಕಿರು ಆಹಾರ ಸಂಸ್ಕರಣ ಘಟಕ ಯೋಜನೆಯಲ್ಲಿ 33 ಘಟಕಗಳಗೆ 3,257 ಕೋಟಿ ರೂ.ಗಳ ಸಾಲ ಮಂಜೂರು ಮಾಡಲಾಗಿರುತ್ತದೆ. ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯಲ್ಲಿ ಅತೀ ಹೆಚ್ಚು ರೈತರನ್ನು ವಿಮಾ ವ್ಯಾಪ್ತಿಗೆ ನೊಂದಾವಣಿ ಮಾಡಲಾಗಿರುತ್ತದೆ.
ಇಡೀ ವಿಶ್ವವನ್ನೇ ತಲ್ಲಣಿಸಿದ ಮಹಾಮಾರಿ ಕೋವಿಡ್ ನಿರ್ವಹಣೆಯನ್ನು ಜಿಲ್ಲಾಡಳಿತ ಯಶಸ್ವಿಯಾಗಿ ನಿಭಾಯಿಸಿದೆ, ಅದರಂತೆ ಪ್ರತಿಯೊಬ್ಬ ಸಾರ್ವಜನಿಕರಿಗೂ ಕೋವಿಡ್ ಲಸಿಕೆಯನ್ನು ನೀಡಲು ಕ್ರಮವಹಿಸಲಾಗಿದೆ. ಹಾಗೂ 100 ರಷ್ಟು ಪ್ರಗತಿ ಸಾಧಿಸಲಾಗಿದೆ. 12 ವರ್ಷಕ್ಕಿಂತ ಮೇಲ್ಪಟ್ಟ ವಿದ್ಯಾರ್ಥಿಗಳಗೂ ಸಹ ಕೋವಿಡ್ ಲಸಿಕೆಯನ್ನು ನೀಡಲಾಗಿರುತ್ತದೆ. ಇನ್ನೂ ಸಹ ಕೋವಿಡ್ ಪ್ರಕರಣಗಳು ಮರುಕಳಿಸುತ್ತಿದ್ದು ಪ್ರತಿಯೊಬ್ಬ ಸಾರ್ವಜನಿಕರು ಸಹ ಮಾಸ್ಕ್ ಧರಿಸುವ ಮೂಲಕ ಮತ್ತು ಲಸಿಕೆ ಪಡೆಯುವ ಮೂಲಕ ಕೋವಿಡನ್ನು ನಿಯಂತ್ರಿಸಲು ಕೋರುತ್ತೇನೆ.
ಆಯುಷ್ಮಾಮನ್ ಭಾರತ ಆರೋಗ್ಯ ಕರ್ನಾಟಕ ಯೋಜನೆಯಲ್ಲಿ ಸಮೂರು 9 ಲಕ್ಷ ಜನರಿಗೆ ಕಾರ್ಡ್ಗಳನ್ನು ವಿತರಿಸಲಾಗಿದ್ದು, ಈ ಪೈಕಿ ಪ್ರಸಕ್ತ ಸಾಲಿನಲ್ಲಿ ಸುಮಾರು 45,000 ಜನರು ಈ ಯೋಜನೆಯ ಸದುಪಯೋಗವನ್ನು ಪಡೆದಿರುತ್ತಾರೆ.ಬೆಳಕು ಯೋಜನೆಯಡಿ 4,012 ವಿದ್ಯುತ್ ರಹಿತ ಮನೆಗಳಗೆ ವಿದ್ಯುತ್ ಸಂಪರ್ಕವನ್ನು ಕಲ್ಪಸಲಾಗಿರುತ್ತದೆ ಮತ್ತು 1,384 ವಿಫಲಗೊಂಡ ವಿತರಣಾ ಪರಿವರ್ತಕಗಳನ್ನು 24 ಗಂಟೆಯೊಳಗೆ ಬದಲಾಯಿಸಲಾಗಿರುತ್ತದೆ ಹಾಗೂ ಜಿಲ್ಲೆಗೆ 2 ಹೊಸ 33 ಕೆ.ವಿ ಜಿಐಎಸ್ ಉಪಕೇಂದ್ರವನ್ನು ಸ್ಥಾಪಿಸಲು ಕ್ರಮವಹಿಸಲಾಗಿದೆ.
ರಾಷ್ಟ್ರೀಯ ಹೆದ್ದಾರಿ 234 ಬಿಸಿರೋಡ್ನಿಂದ ಪುಂಜಾಲಕಟ್ಟೆ ದ್ವಿಪಥ ರಸ್ತೆ ಅಗಲೀಕರಣ ಕಾಮಗಾರಿಯನ್ನು 159.70 ಕೋಟಿ ರೂ.ಗಳ ಮೊತ್ತದಲ್ಲಿ ಪೂರ್ಣಗೊಳಸಲಾಗಿರುತ್ತದೆ ಹಾಗೂ ಪುಂಜಾಲಕಟ್ಟೆಯಿಂದ ಚಾರ್ಮಾಡಿವರೆಗೆ ರಸ್ತೆ ಅಗಲೀಕರಣಕ್ಕೆ 718.52 ಕೋಟಿ ರೂ.ಗಳ ಅನುಮೋದನೆಗೊಂಡು ಟೆಂಡರ್ ಪ್ರಕ್ರಿಯೆಯಲ್ಲಿರುತ್ತದೆ.
ರಾಷ್ಟ್ರೀಯ ಹೆದ್ದಾರಿ 66 ಮತ್ತು 73 ಗಳಲ್ಲಿರುವ ಬಿ.ಸಿ. ರಸ್ತೆ ವಿಸ್ತರಣಾ ಕಾರ್ಯ ಪ್ರಗತಿಯಲ್ಲಿದ್ದು, ಈ ಯೋಜನೆಗೆ 360 ಕೋಟಿ ರೂ.ಗಳ ಅನುದಾನವನ್ನು ಈಗಾಗಲೇ ಬಿಡುಗಡೆಗೊಳಸಲು ಕ್ರಮವಹಿಸಲಾಗಿದೆ.
ಮುಖ್ಯಮಂತ್ರಿಗಳ ಅಮೃತ್ ನಗರೋತ್ಥಾನ ಯೋಜನೆಯಡಿ ನಗರ ಸ್ಥಳೀಯ ಸಂಸ್ಥೆಗಳಿಗೆ ಒಟ್ಟು 130 ಕೋಟಿ ರೂ.ಗಳ ಅನುದಾನ ಮಂಜೂರು ಮಾಡಲಾಗಿದೆ. ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ 3621 ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿರುತ್ತದೆ. ಹಾಗೂ ಪೌರಕಾರ್ಮಿಕ ಗೃಹ ಭಾಗ್ಯ ಪೂರ್ಣಗೊಂಡಿರುತ್ತದೆ. ಯೋಜನೆಯಡಿ 35 ಮನೆಗಳು ಪೂರ್ಣಗೊಂಡಿವೆ. ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಹಭಾಗಿತ್ವದಲ್ಲಿ 1000 ಕೋಟಿ ರೂ.ಗಳ ಅನುದಾನದಲ್ಲಿ ವಿವಿಧ ಕಾಮಗಾರಿಗಳನ್ನು ಅನುಷ್ಟಾನನಗೊಳಿಸಲಾಗುತ್ತಿದೆ. ಈ ಪೈಕಿ ಈಗಾಗಲೇ 523 ಕೋಟಿ ರೂ.ಗಳ ವೆಚ್ಚದಲ್ಲಿ ವಿವಿಧ ಕಾಮಗಾರಿಗಳು ಪೂರ್ಣಗೊಂಡಿರುತ್ತದೆ. ಪ್ರಮುಖವಾಗಿ ಮಂಗಳಾದೇವಿ ರಸ್ತೆ ಅಭಿವೃದ್ಧಿ, ಹಂಪನಾಕಟ್ಟೆ ನೆಹರೂ ಮೈದಾನ, ಲೂಪ್ ರಸ್ತೆ ಅಭಿವೃದ್ಧಿ, ಸೆಂಟ್ರಲ್ ರೈಲ್ವೇ ನಿಲ್ದಾಣದಿಂದ ಸೆಂಟ್ರಲ್ ಮಾರ್ಕೆಟ್ಗೆ ಹೋಗಲು ಸುಸಜ್ಜಿತವಾದ ಪಾದಾಚಾರಿ ಮಾರ್ಗ, ಗುಜ್ಜರ್ಕೆರೆ ಹಾಗೂ ಕದ್ರಿ ಪಾರ್ಕ್ ಅಭಿವೃದ್ಧಿ. ಮಂಗಳಾ ಕ್ರೀಡಾಂಗಣ ಅಭಿವೃದ್ಧಿ. ಕಾವೂರು ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಸಲಾಗುತ್ತಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 2,74,646 ಅಂತ್ಯೋದಯ ಮತ್ತು ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಕುಟುಂಬಗಳಿರುತ್ತವೆ. ಹೊಸ ಪಡಿತರ ಚೀಟಿಗಾಗಿ ಒಟ್ಟು 13,990 ಅರ್ಜಿಗಳು ಸ್ವೀಕೃತಗೊಂಡಿರುತ್ತದೆ.
ನಗರ ಪ್ರದೇಶದ ಸರ್ಕಾರಿ ಜಾಗದಲ್ಲಿ ಅನಧಿಕೃತವಾಗಿ ಮನೆ ನಿರ್ಮಿಸಿಕೊಂಡು ವಾಸಿಸುತ್ತಿರುವ ಜನರಿಗೆ ವಾಸ್ತವ್ಯದ ಕಟ್ಟಡವನ್ನು ಸಕ್ರಮ ಮಾಡಲು 94ಸಿಸಿರಡಿ ಒಟ್ಟು 24,737 ಫಲಾನುಭವಿಗಳಿಗೆ ಹಕ್ಕುಪತ್ರ ನೀಡಲಾಗಿರುತ್ತದೆ. ಅದೇ ರೀತಿ ಗ್ರಾಮೀಣ ಪ್ರದೇಶದ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಮನೆ ನಿರ್ಮಿಸಿಕೊಂಡಿರುವವರಿಗೆ ಸಕ್ರಮೀಕರಿಸಲು 94ಸಿ ರಡಿ ನೀಡಲಾಗಿರುತ್ತದೆ. ಒಟ್ಟು 48,015 ಫಲಾನುಭವಿಗಳಿಗೆ ಹಕ್ಕುಪತ್ರ ನೀಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಡೀಮ್ಡ್ ಫಾರೆಸ್ಟ್ಗೆ ಸಂಬಂಧಿಸಿದಂತೆ ಹಲವು ವರ್ಷಗಳಿಂದ ಇದ್ದ ಸಮಸ್ಯೆಯನ್ನು ನಮ್ಮ ಸರ್ಕಾರ ಬಗೆಹರಿಸಿರುತ್ತದೆ. ಮೊದಲನೇ ಸಮಿತಿ ಪಟ್ಟಿಯಲ್ಲಿ 66,428.93 ಹೆ. ಪ್ರದೇಶದಲ್ಲಿ ಕ್ಷೇತ್ರ ಪರಿಶೀಲನೆ ನಂತರ ಸುಮಾರು 34,850.48 ಹೆ. ಪ್ರದೇಶವನ್ನು ಡೀಮ್ಡ್ ಫಾರೆಸ್ಟ್ ಪಟ್ಟಿಯಿಂದ ಕೈಬಿಡಲು ಕ್ರಮವಹಿಸಲಾಗಿದೆ.
ಒಟ್ಟಾರೆಯಾಗಿ ಸವಾರ್ಂಗೀಣ ಅಭಿವೃದ್ಧಿಗಾಗಿ ಸರ್ಕಾರ ಕಟಿಬದ್ಧವಾಗಿದ್ದು ವಿವಿಧ ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಡುವ ನಿಟ್ಟಿನಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಅನುಷ್ಟಾನಗೊಳಿಸಲಾಗುತ್ತಿದೆ. ಜಿಲ್ಲೆಯ ಸವಾರ್ಂಗೀಣ ಅಭಿವೃದ್ಧಿಗೆ ಸರ್ವರ ಸಹಕಾರವನ್ನು ಅಪೇಕ್ಷಿಸುತ್ತೇನೆ.
ಶಿಕ್ಷಣ, ಕೈಗಾರಿಕೋದ್ಯಮ, ಕೃಷಿ, ಆರೋಗ್ಯ ಕ್ಷೇತ್ರದಲ್ಲಿ ಪ್ರಗತಿಯನ್ನು ಕಾಣಬೇಕಾದರೆ ಎಲ್ಲರೂ ಕೈಜೋಡಿಸಬೇಕಿರುತ್ತದೆ. ಪ್ರತಿಯೊಬ್ಬರು ಸಹ ಸ್ವಾವಲಂಭಿ ಜೀವನವನ್ನು ನಡೆಸಿದಾಗ ಮಾತ್ರ ನಿಜವಾದ ಸ್ವಾತಂತ್ರ್ಯದ ಅರ್ಥ ಬರುತ್ತದೆ. ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂರವರು ಹೇಳುವಂತೆ 2025ರ ಹೊತ್ತಿಗೆ ಭಾರತ ವಿಶ್ವಗುರು ಸ್ಥಾನಕ್ಕೆ ಏರಲು ಭಾರತೀಯರು ದೃಢಸಂಕಲ್ಪ ಮಾಡಬೇಕು. ಮಹಾತ್ಮಗಾಂಧಿ ಕಂಡ ಕನಸಿನ ಭಾರತವನ್ನು ನನಸು ಮಾಡುವ ಪಣತೊಡಬೇಕು. ವಿಜ್ಞಾನ, ತಂತ್ರಜ್ಞಾನ. ಸಂಶೋಧನೆಗಳು ಹಾಗೂ ಆವಿಷ್ಕಾರಗಳ ಮೂಲಕ ರಚನಾತ್ಮಕ ಮತ್ತು ಪ್ರಗತಿದಾಯಕ ಬದಲಾವಣೆಗೆ ಪ್ರತಿಯೊಬ್ಬರು ಮನಸ್ಸು ಮಾಡಬೇಕಿದೆ. ಸ್ವಾತಂತ್ರ್ಯದ ಅಮೃತ ಮಹೋತ್ಸವ | ಸ್ವಾತಂತ್ರ್ಯ ಹೋರಾಟದ ಉತ್ಸಾಹ ಹುತಾತ್ಮರಿಗೆ ಗೌರವ ಮತ್ತು ನವ ಭಾರತ ನಿರ್ಮಾಣದ ಅವರ ಪ್ರತಿಜ್ಞೆಯನ್ನು ಅನುಭವಿಸುವಂತಹ ಮಹೋತ್ಸವ ಆಗಿರಬೇಕು.
ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ ಆಚರಿಸುವ ಈ ಸಂದರ್ಭದಲ್ಲಿ ಪ್ರತಿಯೊಬ್ಬ ಭಾರತೀಯರು ದೇಶಾಭಿಮಾನದ ಮೂಲಕ ಮತ್ತು ರಾಷ್ಟ್ರ ಪ್ರಜ್ಞೆಯನ್ನು ಹೊಂದುವ ಮೂಲಕ ನಮ್ಮ ದೇಶದ ಘನತೆಯನ್ನು ಎತ್ತಿಹಿಡಿಯಬೇಕಾಗಿದೆ. ಸಂಭ್ರಮದ ಜೊತೆಗೆ ದೇಶದ ಸವಾರ್ಂಗೀಣ ಅಭಿವೃದ್ಧಿಗೆ ಸಂಕಲ್ಪವನ್ನು ಮಾಡಬೇಕಿದೆ. ಸಂಕಲ್ಪವು ಸಂಭ್ರಮದ ರೂಪವನ್ನು ಪಡೆದಾಗ ಕೋಟ್ಯಂತರ ಜನರ ಪ್ರತಿಜ್ಞೆ ಮತ್ತು ಶಕ್ತಿಗೆ ಅರ್ಥ ಬರುತ್ತದೆ. ಆದ್ದರಿಂದ ಪ್ರತಿಯೊಬ್ಬ ಭಾರತೀಯ ಪ್ರಜೆಯು ಸಹ ಸ್ವಾತಂತ್ರ್ಯ ಹೋರಾಟಗಾರರ ಕನಸುಗಳನ್ನು ಸಾಕಾರಗೊಳಿಸಿ, ಅವರು ಬಯಸಿದ್ದ ಉತ್ತುಂಗಕ್ಕೆ ಭಾರತವನ್ನು ಏರಿಸುವ ಪ್ರಯತ್ನ ಮಾಡಬೇಕಾಗಿದೆ. ಅಮೃತ ಮಹೋತ್ಸವದ ಆಚರಣೆಯು ಐತಿಹಾಸಿಕ ಮಹೋತ್ಸವವಾಗಿ ದಾಖಲಾಗಿ ಸನಾತನ ಭಾರತದ ವೈಭವ ಮತ್ತು ಆಧುನಿಕ ಭಾರತದ ವೈಶಿಷ್ಟ್ಯವನ್ನು ಸಾಕಾರಗೊಳಿಸುವಂತಾಗಲಿ ಎಂದರು.
ಸ್ಥಳೀಯ ಶಾಸಕರಾದ ಡಿ. ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ, ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ಉಪ ಮೇಯರ್ ಸುಮಂಗಲಾ ರಾವ್, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಸಹಾಯಕ ಆಯುಕ್ತ ಮದನ್ ಮೋಹನ್, ವಿವಿಧ ಇಲಾಖೆಗಳ ಅಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಅಪಾರ ಸಂಖ್ಯೆಯ ಸಾರ್ವಜನಿಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಇದೇ ಕಾರ್ಯಕ್ರಮದಲ್ಲಿ ಸ್ವಾತಂತ್ರ್ಯ ಹೋರಾಟಗಾರ ಮಟ್ಟಾರ ವಿಠ್ಠಲ ಕಿಣಿ, ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಅತ್ಯುತ್ತಮ ಸೇವೆ ಸಲ್ಲಿಸಿದ ವೆನ್ಲಾಕ್ ಹಾಗೂ ಫಾದರ್ ಮುಲ್ಲರ್ ಆಸ್ಪತ್ರೆಯ ಮುಖ್ಯಸ್ಥರನ್ನು ಸನ್ಮಾನಿಸಲಾಯಿತು.