ಮಂಗಳೂರು, ಆ 16 (DaijiworldNews/MS): ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು ಅಕ್ರಮವಾಗಿ ಸಾಗಿಸುತ್ತಿದ್ದ ವಿದೇಶಿ ಕರೆನ್ಸಿ ನೋಟುಗಳನ್ನು ಆ. 15 ರ ಸೋಮವಾರ ವಶಪಡಿಸಿಕೊಂಡಿದ್ದಾರೆ.
ಕಾಸರಗೋಡು ಮೂಲದ ಇಬ್ಬರು ವ್ಯಕ್ತಿಗಳು ಸ್ಪೈಸ್ಜೆಟ್ ವಿಮಾನದ ಮೂಲಕ ಭಾರತದಿಂದ ಅಕ್ರಮವಾಗಿ 20,71,158 ರೂಪಾಯಿ ಮೌಲ್ಯದ ವಿದೇಶಿ ಕರೆನ್ಸಿ ನೋಟುಗಳನ್ನು ದುಬೈಗೆ ಸಾಗಿಸಲು ಯತ್ನಿಸುತ್ತಿದ್ದರು ಎಂದು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (ಎಂಎಐ) ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.
13,200 ಅಮೆರಿಕನ್ ಡಾಲರ್, 31800 ಯುಎಇ ದಿರಾಮ್, 16,000 ಸೌದಿ ರಿಯಾಲ್ ಮತ್ತು 160 ಕುವೈತ್ ದಿನಾರ್ ಮೌಲ್ಯದ ನೋಟುಗಳಿದ್ದವು. ಈ ಕುರಿತು ಪ್ರಕರಣ ದಾಖಲಾಗಿದೆ.