ಕಾರ್ಕಳ, ಫೆ 01(SM): ನಗರದ ವಿಸ್ತೃತ ಬಸ್ ನಿಲ್ದಾಣದಲ್ಲಿ ಖಾಸಗಿ ಮತ್ತು ಸರಕಾರಿ ಬಸ್ಗಳ ಸಿಬ್ಬಂದಿಗಳು ಹೊಡೆದಾಡಿಕೊಂಡು ತಾಲೂಕು ಸರಕಾರಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ.
ಉಡುಪಿ-ಕಾರ್ಕಳ ಕಡೆಗೆ ಪ್ರಯಾಣಿಸುತ್ತಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸಿನ ನಿರ್ವಾಹಕನಾಗಿ ದುಡಿಯುತ್ತಿದ್ದ ಬಾಗಲಕೋಟೆಯ ಸಿದ್ದಪ್ಪ ನಡಕೋಶಿ(30) ಎಂಬವರಿಗೆ ಖಾಸಗಿ ಬಸ್ಸಿನ ಚಾಲಕ ಹಾಗೂ ನಿರ್ವಾಹಕರು ಅವಾಚ್ಯ ಶಬ್ದಗಳಿಂದ ನಿಂದಿಸಿ ಪರಸ್ಪರ ಮಾರಾಣಾಂತಿಕವಾಗಿ ಹಲ್ಲೆಗೈದು ಜೀವಬೆದರಿಕೆಯೊಡ್ಡಿದ್ದಾರೆ. ಮಾತ್ರವಲ್ಲದೇ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದಾರೆ.
ಇದೇ ಸಂದರ್ಭ ಜಗಳ ಬಿಡಿಸಲು ಮುಂದಾದ ಬಸ್ ಏಜೆಂಟ್ ನೆಲ್ಲಿಕಾರಿನ ಹರೀಶ್ ಪೂಜಾರಿ(37) ಎಂಬವರು ಏಟು ತಿಂದಿದ್ದಾರೆ.