ಮಂಗಳೂರು, ಆ 19(DaijiworldNews/HR): ಶ್ರೀನಿವಾಸ ವಿಶ್ವವಿದ್ಯಾನಿಲಯ, ಇನ್ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್ಮೆಂಟ್ ಮತ್ತು ಟೂರಿಸಂ ಮತ್ತು ಇಂಟೀರಿಯರ್ ಡಿಸೈನ್ ವಿಭಾಗ, ಪಾಂಡೇಶ್ವರ ವತಿಯಿಂದ ಆಗಸ್ಟ್ 18ರಂದು ಪಾಂಡೇಶ್ವರದ ಸಿಟಿ ಕ್ಯಾಂಪಸ್ನಲ್ಲಿ 'ಶ್ರೀ ಕೃಷ್ಣ ಜನ್ಮಾಷ್ಟಮಿ – 2022' ಆಯೋಜಿಸಲಾಯಿತು.
ಶ್ರೀನಿವಾಸ ವಿಶ್ವವಿದ್ಯಾಲಯದ ಕುಲಾಧಿಪತಿ ಹಾಗೂ ಎ.ಶಾಮರಾವ್ ಪ್ರತಿಷ್ಠಾನದ ಅಧ್ಯಕ್ಷ ಡಾ.ಸಿಎ ಎ.ರಾಘವೇಂದ್ರರಾವ್ ಅಧ್ಯಕ್ಷತೆ ವಹಿಸಿದ್ದರು.
ಶ್ರೀನಿವಾಸ ವಿಶ್ವವಿದ್ಯಾಲಯದ ಸಹ-ಕುಲಾಧಿಪತಿ ಮತ್ತು ಎ. ಶಾಮರಾವ್ ಫೌಂಡೇಶನ್ ಉಪಾಧ್ಯಕ್ಷ ಡಾ. ಎ. ಶ್ರೀನಿವಾಸ್ ರಾವ್ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದರು.
ಇನ್ನು ಶ್ರೀನಿವಾಸ ವಿಶ್ವವಿದ್ಯಾಲಯದ ಅಭಿವ್ರದ್ಧಿ ರಿಜಿಸ್ಟ್ರಾರ್ ಡಾ.ಅಜಯ್ ಕುಮಾರ್ ಮತ್ತು ಇನ್ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್ಮೆಂಟ್ ಮತ್ತು ಟೂರಿಸಂ ಡೀನ್ ಪ್ರೊ.ಸ್ವಾಮಿನಾಥನ್ ಎಸ್., ಇನ್ಸ್ಟಿಟ್ಯೂಟ್ ಆಫ್ ಫಿಸಿಯೋಥೆರಪಿ ಡೀನ್ ಡಾ.ಎಸ್.ರಾಜಶೇಖರ್, ಎಲ್ಲ ಸಂಸ್ಥೆಗಳ ಡೀನ್ಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.
ತುಳು ನಾಡಿನ ಹುಲಿ ನೃತ್ಯ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿದ್ದು, ಮೊಸರು ಕುಡಿಕೆ ಹೊಡೆಯಲಾಯಿತು. ವಿದ್ಯಾರ್ಥಿಗಳಿಂದ ನೃತ್ಯ ಪ್ರದರ್ಶನ ನಡೆಯಿತು.