ಮಂಗಳೂರು, ಆ 23 (DaijiworldNews/HR): ಮಳೆಗಾಲ ಮುಗಿದ ನಂತರ ರಾಷ್ಟ್ರೀಯ ಹೆದ್ದಾರಿಯ ಡಾಂಬರೀಕರಣ ಕಾಮಗಾರಿಯನ್ನು ಪೂರ್ಣಗೊಳಿಸುವುದಾಗಿ ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಎನ್ಎಚ್ಎಐ ಅಧಿಕಾರಿ ಭರವಸೆ ನೀಡಿದ್ದಾರೆ.
ಸೆಪ್ಟೆಂಬರ್ ಅಂತ್ಯದೊಳಗೆ ಕಾಮಗಾರಿ ಪೂರ್ಣಗೊಳಿಸುವಂತೆ ನಳಿನ್ ಅಧಿಕಾರಿಗೆ ಸೂಚಿಸಿದ್ದು, ಭಾರೀ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿನ ಗುಂಡಿಗಳನ್ನು ಮುಚ್ಚಲು ವಿಳಂಬವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಗರದ ಜಿಲ್ಲಾ ಪಂಚಾಯತ್ ನ ನೇತ್ರಾವತಿ ಸಭಾಂಗಣದಲ್ಲಿ ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ (ದಿಶಾ)ಯಲ್ಲಿ ಸುರತ್ಕಲ್ ಟೋಲ್ ಗೇಟ್ ವಿಲೀನಕ್ಕೆ ಸಂಬಂಧಿಸಿದಂತೆ ಸಭೆಯಲ್ಲಿ ಚರ್ಚೆ ನಡೆದಿದೆ.
ಇನ್ನು ಸಭೆಯಲ್ಲಿ ಕೈಗೊಂಡ ನಿರ್ಣಯದಂತೆ ಒಂದು ತಿಂಗಳೊಳಗೆ ಸುರತ್ಕಲ್ ಟೋಲ್ ಗೇಟ್ ವಿಲೀನಗೊಳಿಸಲಾಗುವುದು ಎಂದು ಎನ್ಎಚ್ಎಐ ಅಧಿಕಾರಿ ಲಿಂಗೇಗೌಡ ತಿಳಿಸಿದರು.
ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರೊಂದಿಗೆ ಮಾತುಕತೆ ನಡೆಸಿದ್ದು, ವಿಲೀನಕ್ಕೆ ಕ್ರಮ ಕೈಗೊಳ್ಳಲು ಅವರು ಅನುಮತಿ ನೀಡಿದ್ದಾರೆ ಎಂದು ಎನ್ಎಚ್ಎಐ ಅಧಿಕಾರಿ ನಳಿನ್ ಅವರಿಗೆ ತಿಳಿಸಿದರು.