ಮಂಗಳೂರು,ಫೆ 03 (MSP):ವಿದೇಶದಿಂದ ವಿಮಾನದಲ್ಲಿ ಬಜ್ಪೆಯ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ವ್ಯಕ್ತಿಯೊಬ್ಬರು ಫಾಯಿಲ್ ರೂಪದಲ್ಲಿ ಚಿನ್ನ ಕಳ್ಳ ಸಾಗಣೆ ನಡೆಸಲು ಯತ್ನಿಸಿದ ಪ್ರಕರಣವನ್ನು ಕಸ್ಟಮ್ಸ್ ಅಧಿಕಾರಿಗಳು ಪತ್ತೆಹಚ್ಚಿದ್ದಾರೆ. ಆರೋಪಿಯಿಂದ 358.78 ಗ್ರಾಂ ಚಿನ್ನ ವಶಪಡಿಸಿಕೊಳ್ಳಲಾಗಿದೆ.
ಆರೋಪಿಯು ದುಬೈನಿಂದ ಸ್ಪೈಸ್ ಜೆಟ್ ವಿಮಾನದಲ್ಲಿ ಬಂದಿಳಿದಿದ್ದ. ಆತನ ಲಗೇಜು ತಪಾಸಣೆ ನಡೆಸಿದಾಗ ಫಾಯಿಲ್ ರೂಪದಲ್ಲಿ ಚಿನ್ನ ಕಳ್ಳಸಾಗನೆಗೆ ಯತ್ನಿಸುತ್ತಿರುವುದು ಪತ್ತೆಯಾಯಿತು. ರೂ11.93 ಲಕ್ಷ ಮೌಲ್ಯದ ಚಿನ್ನ ವಶಪಡಿಸಿಕೊಂಡಿದ್ದು ತನಿಖೆ ನಡೆಸಲಾಗುತ್ತಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.