ಉಡುಪಿ,ಫೆ 03 (MSP): ರಾಜ್ಯದಲ್ಲಿ ಮರಣಮೃದಂಗ ಬಾರಿಸುತ್ತಿರುವ ಮಂಗನಕಾಯಿಲೆ ಸೋಂಕು ಫ್ರಾನ್ಸ್ ನ ಪ್ರವಾಸಿ ಮಹಿಳೆಯೊಬ್ಬರಿಗೆ ತಾಗಿದ್ದು, ಸದ್ಯ ಅವರು ಮಣಿಪಾಲದ ಕೆಎಂಸಿ ಆಸ್ಪತೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕರಾವಳಿ ಭಾಗ, ಉತ್ತರ ಕನ್ನಡ ಜಿಲ್ಲೆ ಪ್ರವಾಸಕ್ಕೆ ಬಂದಿದ್ದ ವಿದೇಶಿಗರ ತಂಡದಲ್ಲಿದ್ದ ಜಿಲ್ಲೆ ಪ್ರವಾಸಕ್ಕೆ ಬಂದಿದ್ದ ವಿದೇಶಿಗರ ತಂಡದಲ್ಲಿದ್ದ 33 ವರ್ಷದ ನೇಪಾಳ ಮೂಲದ ಫ್ರಾನ್ಸ್ ಮಹಿಳೆ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣ ,ಯಾಣಕ್ಕೆ ಭೇಟಿ ನೀಡಿದ್ದರು. ಆರಂಭದಲ್ಲಿ ಜ್ವರ ಕಾಣಿಸಿಕೊಂಡಾಗ ಉ.ಕ ಜಿಲ್ಲೆಯ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆದಿದ್ದರು. ಜ್ವರ ಉಲ್ಬಣಗೊಂಡ ಬಳಿಕ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಇದುವರೆಗೆ ಯಾರಿಗೂ ಮಂಗನ ಕಾಯಿಲೆ ಇರುವುದು ಪತ್ತೆಯಾಗಿಲ್ಲ.