ಬೆಳ್ತಂಗಡಿ, ಆ 25 (DaijiworldNews/SM): ಕಳೆದ ಒಂದು ವರ್ಷದಿಂದ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪಿಎಸ್ಐ -1 ಅಗಿ ಕರ್ತವ್ಯ ನಿರ್ವಹಿಸುತ್ತಿದ್ದ ದಕ್ಷ ಹಾಗೂ ಪ್ರಮಾಣಿಕ ಅಧಿಕಾರಿ ಕೃಷ್ಣಕಾಂತ್ ಪಾಟೀಲ್ ಅವರನ್ನು ಪಶ್ಚಿಮ ವಲಯ ಐಜಿಪಿ ಕಚೇರಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಇನ್ನೂ ಧರ್ಮಸ್ಥಳ ಪಿಎಸ್ಐ -1 ತೆರವಾದ ಸ್ಥಾನಕ್ಕೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಪೊಲೀಸ್ ಠಾಣೆಯಲ್ಲಿ ಪಿಎಸ್ಐ ಅಗಿದ್ದ ಅನಿಲ್ ಕುಮಾರ್.ಡಿ ಅವರನ್ನು ನೇಮಕ ಮಾಡಲಾಗಿದೆ. ಇಂದು ಧರ್ಮಸ್ಥಳ ಠಾಣೆಯಲ್ಲಿ ಪಿಎಸ್ಐ ಕೃಷ್ಣಕಾಂತ್ ಪಾಟೀಲ್ ಅವರಿಂದ ಅನಿಲ್ ಕುಮಾರ್.ಡಿ ಅಧಿಕಾರ ಸ್ವೀಕರಿಸಿಕೊಂಡರು.
ಪಿಎಸ್ಐ ಕೃಷ್ಣಕಾಂತ್ ಪಾಟೀಲ್ ಅವರು ಪ್ರಮಾಣಿಕ ಅಧಿಕಾರಿಯಾಗಿ ಸಾರ್ವಜನಿಕರೊಂದಿಗೆ ಒಳ್ಳೆಯ ಜನಸ್ನೇಹಿಯಾಗಿ ಎಲ್ಲರ ಮೆಚ್ಚುಗೆ ಪಾತ್ರರಾಗಿದ್ದರು.