ಸುಳ್ಯ, ಆ 25 (DaijiworldNews/SM): ಮಸೂದ್, ಪ್ರವೀಣ್ ಹತ್ಯೆಯಿಂದಾಗಿ ಎಲ್ಲೆಡೆ ಸುದ್ದಿಯಲ್ಲಿರುವ ಬೆಳ್ಳಾರೆಯಲ್ಲಿ ಇಂದು ಶಾಂತಿ ಸಭೆ ನಡೆಸಲಾಗಿದೆ. ಗಣೇಶೋತ್ಸವ ಆಚರಣೆ ಹಿನ್ನೆಲೆಯಲ್ಲಿ ಶಾಂತಿ ಸಭೆ ನಡೆಸಲಾಗಿದೆ. ಬೆಳ್ಳಾರೆ ಪೊಲೀಸ್ ಠಾಣಾ ವತಿಯಿಂದ ಬೆಳ್ಳಾರೆ ಅಂಬೇಡ್ಕರ್ ಭವನದಲ್ಲಿ ಪುತ್ತೂರು ಡಿವೈಎಸ್ಪಿ ಡಾ.ವೀರಯ್ಯ ಹೀರೆಮಠ್ ನೇತೃತ್ವದಲ್ಲಿ ಶಾಂತಿ ಸಭೆ ನಡೆಸಲಾಗಿದೆ.
ಗಣೇಶೋತ್ಸವ ಹಬ್ಬ ಸಮೀಪಿಸುತ್ತಿರುವ ಹಿನ್ನೆಲೆ ಹಾಗೂ ಬೆಳ್ಳಾರೆಯಲ್ಲಿ ಇತ್ತೀಚೆಗೆ ನಡೆದ ಅಹಿತಕರ ಘಟನೆ ನಡೆದ ಬಗ್ಗೆ ಸಾರ್ವಜನಿಕರನ್ನು ಒಟ್ಟುಗೂಡಿಸಿ ಶಾಂತಿ ಸಭೆ ನಡೆಸಲಾಯಿತು. ಡಿವೈಎಸ್ಪಿ ಡಾ. ವೀರಯ್ಯ ಹೀರೆಮಠ್ ಮಾತನಾಡಿ, ಬೆಳ್ಳಾರೆ ಘಟನೆ ಇಡೀ ದೇಶದಲ್ಲಿ ಸುದ್ದಿ ಮಾಡಿತು. ಮುಂದಿನ ದಿನಗಳಲ್ಲಿ ಇಂತಹ ಘಟನೆಗೆ ಅನುವು ಮಾಡಿ ಕೊಡದೆ ಶಾಂತಿ ಕಾಪಾಡಿಕೊಂಡು ಎಲ್ಲರೂ ಸಹಕರಿಸಿ ಎಂದರು.