ಉಡುಪಿ, ಫೆ 03 (MSP):ವಿಚಾರಣಾಧೀನ ಖೈದಿಯೋರ್ವ ಉಡುಪಿಯ ಸಬ್ ಜೈಲ್ ನಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಮಾಹಿತಿ ತಿಳಿದುಬಂದಿದೆ. ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿಯನ್ನು ಕಿದುಯೂರು ಗ್ರಾಮದ ನಿವಾಸಿ ಅಮರನಾಥ್( 32) ಎಂದು ಗುರುತಿಸಲಾಗಿದೆ.
ಈತನ ವಿರುದ್ದ ಉಡುಪಿ ಮಹಿಳಾ ಠಾಣೆಯಲ್ಲಿ ಅತ್ಯಾಚಾರ ಹಾಗೂ ಜಾತಿ ನಿಂದನೆ ಪ್ರಕರಣ ದಾಖಲಾಗಿತ್ತು. ಜೈಲಿನಲ್ಲಿರುವ ಕಾನ್ಫರೆನ್ಸ್ ಹಾಲ್ ನ ಫ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆ ಪ್ರಯತ್ನಿಸಿದ್ದು, ಈತನನ್ನು ಆಸ್ಪತ್ರೆಗೆ ಸಾಗಿಸುವ ಸಂದರ್ಭ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಗೆ ಸಂಬಂಧಪಟ್ಟಂತೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.