ಮಂಗಳೂರು, ಫೆ 03(SM): ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಪೂರ್ವಭಾವಿಯಾಗಿ ಅಧಿಕಾರಿಗಳ ವರ್ಗಾವಣೆ ಪ್ರಕ್ರಿಯೆ ಆರಂಭಗೊಂಡಿದೆ. ದಕ್ಷಿಣ ಕನ್ನಡದ ಅಪರ ಜಿಲ್ಲಾಧಿಕಾರಿ ಕುಮಾರ್ ಅವರನ್ನು ವರ್ಗಾವಣೆಗೊಳಿಸಿ ಸರಕಾರ ಆದೇಶ ನೀಡಿದೆ.
ಕುಮಾರ್ ಅವರನ್ನು ಚಿಕ್ಕಮಗಳೂರು ಜಿಲ್ಲೆಯ ಅಪರ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ. ತೆರವಾಗಿರುವ ಸ್ಥಾನಕ್ಕೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಮುಖ್ಯ ಆಡಳಿತಾಧಿಕಾರಿ ಹಾಗೂ ಕಾರ್ಯದರ್ಶಿಯಾಗಿದ್ದ ಕೃಷ್ಣ ಗೌಡ ಅವರನ್ನು ನೇಮಕಗೊಳಿಸಿ ಸರಕಾರ ಆದೇಶ ನೀಡಿದೆ.
ಅಪರ ಜಿಲ್ಲಾಧಿಕಾರಿ ಕುಮಾರ್ ಅವರು ಕಳೆದ ಹಲವು ಸಮಯಗಳಿಂದ ಮಂಗಳೂರಿನಲ್ಲಿ ಕರ್ತವ್ಯದಲ್ಲಿದ್ದು, ದಕ್ಷ ಅಧಿಕಾರಿ ಎನಿಸಿಕೊಂಡಿದ್ದರು.