ಬಂಟ್ವಾಳ, ಆ 28 (DaijiworldNews/HR): ಸೋಣ ಅಮವಾಸ್ಯೆಯ ದಿನದಿಂದ ಬಾದ್ರಪದ ಶುಕ್ಲ ಚೌತಿ ಹಬ್ಬದ ದಿನದವರೆಗೆ ಸುಳ್ಳ ಮಲೆ ತೀರ್ಥ ಸ್ನಾನಕ್ಕೆ ಪೂರ್ವಭಾವಿಯಾಗಿ ಬಿದಿರಿನ ಕೇರ್ಪು ( ಏಣಿ) ಇಡುವ ಸಂಪ್ರದಾಯ ಆಗಸ್ಟ್ 27 ರಂದು ನಡೆಯಿತು. ಜೊತೆಗೆ ಅರಸು ಗುಡ್ಡೆಚಾಮುಂಡಿ ಮತ್ತು ಪ್ರಧಾನಿ ಪಂಜುರ್ಲಿ ದೈವಗಳಿಗೆ ತಂಬಿಲ ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ಮಾಣಿ ಶ್ರೀ ಉಳ್ಳಾಲ್ತಿ ದೈವಸ್ಥಾನದ ಆಡಳಿತ ಮುಕ್ತೆಸರರಾದ ಮಾಣಿಗುತ್ತು ಸಚಿನ್ ರೈ, ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ರಾದ ಬಾಲಕೃಷ್ಣ ಆಳ್ವ ಕೊಡಾಜೆ ಮತ್ತು ಗ್ರಾಮಸ್ಥರು ಉಪಸ್ಥಿತರದ್ದರು.
ಬುಧವಾರ ಬಾದ್ರಪದ ಚೌತಿವರೆಗೆ ಗುಹಾ ತೀರ್ಥ ಸ್ನಾನಕ್ಕೆ ಭಕ್ತಾದಿಗಳಿಗೆ ಮುಕ್ತ ಅವಕಾಶ ಇದೆ.