ಮಂಗಳೂರು, ಆ 28 (DaijiworldNews/HR): ತೊಕ್ಕೊಟ್ಟು ಜಂಕ್ಷನ್ನಲ್ಲಿ ಭಾನುವಾರ ಬಸ್ಸಿನ ಬ್ರೇಕ್ ಫೇಲ್ ಆಗಿ ಕ್ಸೈಲೋ ಕಾರಿಗೆ ಡಿಕ್ಕಿ ಹೊಡೆದಿರುವ ಘಟನೆ ನಡೆದಿದೆ.
ಬಸ್ ಚಾಲಕನ ಸಮಯ ಪ್ರಜ್ಞೆಯಿಂದಾಗಿ ಬಸ್ಸಿನಲ್ಲಿದ್ದ 21 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದು, ಕಾರಿನಲ್ಲಿದ್ದವರಿಗೂ ಯಾವುದೇ ತೊಂದರೆಯಾಗಿಲ್ಲ.
ಮಂಗಳೂರಿನಿಂದ ಮುಡಿಪುಗೆ ತೆರಳುತ್ತಿದ್ದ ಎಸ್ಎನ್ ಟ್ರಾವೆಲ್ಸ್ ಬಸ್ ತೊಕ್ಕೊಟ್ಟು ಬಸ್ ನಿಲ್ದಾಣ ತಲುಪಬೇಕಿದ್ದಾಗ ಬ್ರೇಕ್ ಫೇಲ್ ಆಗಿ ತೊಕ್ಕೊಟ್ಟು ಜಂಕ್ಷನ್ ಕಡೆಗೆ ಸಾಗಿ ಉಳ್ಳಾಲದಿಂದ ಮುಡಿಪು ಕಡೆಗೆ ಹೋಗುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದ್ದು, ಕಾರಿನ ಒಂದು ಭಾಗ ಸಂಪೂರ್ಣ ಜಖಂಗೊಂಡಿದೆ.
ಈ ಸಂಬಂಧ ಜೆಪ್ಪು ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.