ಸುಳ್ಯ, ಆ 29 (DaijiworldNews/HR): ಭಕ್ತಿ ಭಾವದಿಂದ ತ್ಯಾಗದ ಭಾವನೆ ಮೂಡಲು ಸಾಧ್ಯವಿದೆ. ಧರ್ಮ, ಸಂಸ್ಕೃತಿಯ ರಕ್ಷಣೆಯ ಹೊಣೆ ನಮ್ಮೆಲ್ಲರದಾಗಿದ್ದು, ವಿಶ್ವಹಿಂದೂ ಪರಿಷತ್ ಬಜರಂಗಳ ಸೇರಿದಂತೆ ವಿವಿಧ ಸಂಘಟನೆಗಳು ನಮ್ಮನ್ನು ಧಾರ್ಮಿಕವಾಗಿ ಸಂಘಟಿಸಿ, ಧರ್ಮ ಜಾಗೃತಿಯ ಕೆಲಸವನ್ನು ಮಾಡುತ್ತಿವೆ ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಹೇಳಿದರು.
ಅವರು ಸೋಮವಾರ ವಿಶ್ವ ಹಿಂದೂ ಪರಿಷದ್ ಬಜರಂಗದಳ, ಮೊಸರು ಕುಡಿಕೆ ಉತ್ಸವ ಸಮಿತಿ ಸುಳ್ಯ, ಸುಳ್ಯ ಪ್ರಖಂಡ ವಿಶ್ವಹಿಂದೂ ಪರಿಷದ್ ಸ್ಥಾಪನಾ ದಿನಾಚರಣೆಯ ಅಂಗವಾಗಿ ಆಯೋಜಿಸಿದ 9ನೇ ವರ್ಷದ ಮೊಸರು ಕುಡಿಕೆ ಉತ್ಸವಕ್ಕೆ ಸುಳ್ಯದ ಶ್ರೀ ಚೆನ್ನಕೇಶವ ದೇವಸ್ಥಾನದ ವಠಾರದಲ್ಲಿ ಕೇಸರಿ ಧ್ವಜ ಹಾರಾಡಿಸುವ ಮೂಲಕ ಚಾಲನೆ ನೀಡಿದರು.
ಶ್ರೀ ಚೆನ್ನಕೇಶವ ದೇವಸ್ಥಾನದ ಅನುವಂಶಿಕ ಮೊಕ್ತೇಸರ ಡಾ.ಹರಪ್ರಸಾದ್ ತುದಿಯಡ್ಕ ತೆಂಗಿನಕಾಯಿ ಒಡೆದು ಶೋಭಾಯಾತ್ರೆಗೆ ಶುಭ ಹಾರೈಸಿದರು. ಸುಳ್ಯ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಮೊಸರು ಕುಡಿಕೆ ಉತ್ಸವ ಸಮಿತಿ ಮಾಜಿ ಅಧ್ಯಕ್ಷ ಗೋಪಾಲ ಕೃಷ್ಣ ಕರೋಡಿ, ದೊಡ್ಡಣ್ಣ ಬರೆಮೇಲು, ಉತ್ಸವ ಸಮಿತಿ ಅಧ್ಯಕ್ಷ ಹರೀಶ್ ರೈ ಉಬರಡ್ಕ, ವಿ.ಹೆಚ್.ಪಿ.ಅಧ್ಯಕ್ಷ ಸೋಮಶೇಖರ ಪೈಕ, ಬಜರಂಗದಳ ಜಿಲ್ಲಾ ಸಂಚಾಲಕ ಲತೀಶ್ ಗುಂಡ್ಯ, ಕಾರ್ಯದರ್ಶಿ ಪ್ರಕಾಶ್ ಯಾದವ್ ಸುಳ್ಯ, ಖಜಾಂಜಿ ರಂಜಿತ್ ಸುಳ್ಯ ಸೇರಿದಂತೆ ನೂರಾರು ಮಂದಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.