ಬಂಟ್ವಾಳ, ಸೆ 02 (DaijiworldNews/MS): ಹೆಜ್ಜೇನು ದಾಳಿ ಮಾಡಿದ ಪರಿಣಾಮ ಗಂಭೀರ ಗಾಯಗೊಂಡಿದ್ದ ಬಾಲಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ತಾಲೂಕಿನ ಕಳಾಯಿಯಲ್ಲಿ ಎಂಬಲ್ಲಿ ನಡೆದಿದೆ.
ಮೃತ ಬಾಲಕನನ್ನು ಕಳಾಯಿ ತಾಳಿಪಾಡಿ ನಿವಾಸಿ ಹಕೀಂ ಎಂಬವರ ಪುತ್ರ ಮಾಝಿನ್ (12) ಎಂದು ಗುರುತಿಸಲಾಗಿದೆ.
ಸೆ.1 ರ ಗುರುವಾರ ಸಂಜೆ ಮನೆಯ ಬಳಿ ಆಟವಾಡುತ್ತಿದ್ದ ಮಾಝಿನ್ ಮೇಲೆ ಹೆಜ್ಜೇನು ದಾಳಿ ನಡೆಸಿದ್ದು, ತೀವ್ರ ಅಸ್ವಸ್ಥಗೊಂಡ ಬಾಲಕನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.