ಮಂಗಳೂರು, ಸೆ 02 (DaijiworldNews/SM): ಮಂಗಳೂರಿನ ಕಾರ್ಯಕ್ರಮ ಮುಗಿಸಿದ ಪ್ರಧಾನಿ ನರೇಂದ್ರ ಮೋದಿಯವರು ಹೆಲಿಕಾಪ್ಟರ್ ಮೂಲಕವೇ ವಿಮಾನ ನಿಲ್ದಾಣಕ್ಕೆ ತೆರಳಿದ್ದಾರೆ ಎಂದು ಜನರು ಅಂದುಕೊಂಡಿದ್ದರು. ಆದರೆ, ಪ್ರಧಾನಿ ನರೇಂದ್ರ ಮೋದಿ ವಿಮಾನ ನಿಲ್ದಾಣಕ್ಕೆ ತೆರಳಿದ್ದು ಮಾತ್ರ ರಸ್ತೆ ಮಾರ್ಗದ ಮೂಲಕ.
ಕೂಳೂರು ಮೈದಾನದಿಂದ ಹೊರಟ ಪ್ರಧಾನಿ ನರೇಂದ್ರ ಮೋದಿಯವರು, ಕೆಪಿಟಿ, ಬೋಂದೆಲ್, ಕಾವೂರು ಮೂಲಕ ವಿಮಾನ ನಿಲ್ದಾಣಕ್ಕೆ ರಸ್ತೆ ಮಾರ್ಗದ ಮೂಲಕ ಸಂಚಾರ ನಡೆಸಿದ್ದಾರೆ.
ಕೊನೇ ಕ್ಷಣದಲ್ಲಿ ಸಂಚಾರದಲ್ಲಿ ಬದಲಾವಣೆ ಮಾಡಿ ರೋಡ್ ಮೂಲಕ ಪ್ರಧಾನಿ ನರೇಂದ್ರ ಮೋದಿ ತೆರಳಿದ್ದಾರೆ. ಝೀರೋ ಟ್ರಾಫಿಕ್ ಇಲ್ಲದೇ ಏರ್ಪೋರ್ಟ್ ನತ್ತ ತೆರಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ವಿಮಾನ ನಿಲ್ದಾಣಕ್ಕೆ ಹೆಲಿಕಾಪ್ಟರ್ ಮೂಲಕ ತೆರಳಬೇಕಿದ್ದರು. ಸಂಜೆ ವೇಳೆಯಲ್ಲಿ ಹವಾಮಾನ ವೈಪರಿತ್ಯ ಉಂಟಾದ ಹಿನ್ನೆಲೆಯಲ್ಲಿ ಸಂಚಾರದಲ್ಲಿ ಬದಲಾವಣೆ ಮಾಡಲಾಗಿತ್ತು ಎಂದು ತಿಳಿದುಬಂದಿದೆ.