ಸುರತ್ಕಲ್, ಫೆ 6 (MSP): ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿ, ಮೂಳೂರು ಕಾರ್ಪೋರೇಷನ್ ಬ್ಯಾಂಕ್ ನಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಸುಟ್ಟುಹೋದ ಘಟನೆ ಫೆ.6 ರ ಮಂಗಳವಾರ ಮಧ್ಯರಾತ್ರಿ ನಡೆದಿದೆ.
ಮೂಳೂರು ರಾಷ್ಟ್ರೀಯ ಹೆದ್ದಾರಿ 66 ರ ಬಸ್ಸು ನಿಲ್ದಾಣದ ಪಕ್ಕದಲ್ಲಿರುವ ಪಂಚಮಿ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ಕಾರ್ಪೊರೇಷನ್ ಬ್ಯಾಂಕ್ ಗೆ ಬೆಂಕಿ ತಗುಲಿದ್ದು, ಪೀಠೋಪಕರಣ, ಕಂಪ್ಯೂಟರ್ ಸೇರಿದಂತೆ ಅನೇಕ ವಸ್ತುಗಳುಬೆಂಕಿಗೆ ಆಹುತಿಯಾಗಿದೆ
ಕಟ್ಟಡದಲ್ಲಿ ಬೆಂಕಿ ಕಂಡ ಸ್ಥಳೀಯರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳೀಯರ ಸಮಯ ಪ್ರಜ್ಞೆಯಿಂದ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ.
ಘಟನೆ ವೇಳೆ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಸ್ಥಳಕ್ಕೆ ತುರ್ತಾಗಿ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.
ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿರುವ ಶಂಕೆ ವ್ಯಕ್ತವಾಗಿದ್ದು. ಕಾಪು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.