ಕಾರ್ಕಳ, ಸೆ 05 (DaijiworldNews/HR): ವಿದ್ಯಾರ್ಥಿಗಳಲ್ಲಿ ವ್ಯಕ್ತಿತ್ವ ವಿಕಾಸನ ಹಾಗೂ ಸಮಾಜವನ್ನು ಅರಳಿಸುವ ಹೊಣೆಗಾರಿಕೆ ಶಿಕ್ಷಣರಂಗಕ್ಕಿದೆ. ಆ ಮೂಲಕ ನವಭಾರತ ನಿರ್ಮಾಣದ ಕಲ್ಪನೆಯಲ್ಲಿ ವಿದ್ಯಾರ್ಥಿಗಳನ್ನು ಸಿದ್ಧಪಡಿಸುವಲ್ಲಿ ಶಿಕ್ಷಕ ಪಾತ್ರ ಮಹತ್ವದಾಗಿದೆ. ಭಾರತ ಶಿಕ್ಷಣವು ಇನ್ನಷ್ಟು ಬದಲಾವಣೆಯೊಂದಿಗೆ ಹೊಸ ಹೊಸ ಅವಿಷ್ಕಾರಗಳಿಗೆ ತೆರೆದುಕೊಳ್ಳಬೇಕಾಗಿದೆ ಎಂದು ಇಂಧನ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಚಿವ ವಿ.ಸುನೀಲ್ಕುಮಾರ್ ಹೇಳಿದರು.
ನಗರದ ಎಸ್ವಿಟಿ ವನಿತಾ ಪದವಿ ಪೂರ್ವ ಕಾಲೇಜಿನ ಅಂಡಾರು ವಿಠಲ ರುಕ್ಮಿಣಿ ಸಭಾಭವನದಲ್ಲಿ ಕಾರ್ಕಳ ಮತ್ತು ಹೆಬ್ರಿ ತಾಲೂಕುಗಳ ಶಿಕ್ಷಕ ಸಮಿತಿ ಆಯೋಜಿಸಿದ ಶಿಕ್ಷಕ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದ ಅವರು, ಸಮಾಜದ ಎಲ್ಲ ಕ್ಷೇತ್ರಗಳಲ್ಲಿ ಅರಿವು ಮೂಡಿಸುವ ಶಿಕ್ಷಣ ಅಗತ್ಯವಾಗಿದೆ. ಪ್ರತಿಯೊಂದು ಕ್ಷೇತ್ರಗಳ ನಿರ್ವಹಿಸುವಂತಹ ಸಾಮಾರ್ಥ್ಯವು ಪ್ರತಿಯೊಬ್ಬರಲ್ಲಿ ಇದ್ದಾಗ ನವಭಾರತ ನಿರ್ಮಾಣದ ಕನಸ್ಸಿಗೆ ಪ್ರೇರಣದಾಯಕವಾಗಿರುತ್ತದೆ. ವಿದ್ಯಾರ್ಥಿಗಳನ್ನು ಪ್ರತಿಭೆಗಳನ್ನು ಗುರುತಿಸಿ ಅವರನ್ನು ಮುಖ್ಯವಾಹಿನಿಗೆ ಕರೆತರುವಲ್ಲಿ ಶಿಕ್ಷಕರ ಪಾತ್ರವು ಹಿರಿದಾಗಿದೆ ಎಂದರು.
ಕರ್ನಾಟಕ ಗೇರು ಅಭಿವೃದ್ಧಿ ನಿಗಮ ಮಂಡಳಿಯ ಅಧ್ಯಕ್ಷ ಮಣಿರಾಜ ಶೆಟ್ಟಿ ಮಾತನಾಡಿ, ಪ್ರಾಥಮಿಕ, ಪ್ರೌಢ ಶಾಲಾ ಶಿಕ್ಷಣವು ವ್ಯಕ್ತಿ ಭವಿಷ್ಯವನ್ನು ರೂಪಿಸುವ ಪ್ರಮುಖ ಕಾಲಘಟ್ಟವಾಗಿದೆ. ಅದರ ಮಹತ್ವವನ್ನು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಬೇಕೆಂದರು.
ಶಿಕ್ಷಣ ಕ್ಷೇತ್ರದಲ್ಲಿ ಪ್ರತಿಭಾವನ್ವಿತ ಶಿಕ್ಷಕರನ್ನು ಹಾಗೂ ನಿವೃತ್ತ ಶಿಕ್ಷಕರನ್ನು ಮತ್ತು ಕ್ರೀಡಾ ಕ್ಷೇತ್ರದಲ್ಲಿ ಸಾಧಕ ಶಿಕ್ಷಕರನ್ನು ಗುರುತಿಸಿ ಗೌರವಿಸಿ ಸನ್ಮಾನಿಸಲಾಯಿತು. ಎಸ್ವಿಟಿ ಎಜುಕೇಶನ್ ಟ್ರಸ್ಟ್(ರಿ) ನ ಕಾರ್ಯದರ್ಶಿ ಕೆ.ಪಿ.ಶೆಣೈ ಅಧ್ಯಕ್ಷತೆ ವಹಿಸಿದರು.
ತಹಶೀಲ್ದಾರ್ ಪ್ರದೀಪ್ ಕುರುಡೇಕರ್ ಎಸ್, ಕಾರ್ಕಳ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಗುರುದತ್ ಎಂ.ಎಸ್.ಅಕ್ಷರ ದಾಸೋಹದ ಭಾಸ್ಕರ್, ವಿವಿಧ ಸಂಘಗಳ ಅಧ್ಯಕ್ಷರುಗಳಾದ ರಮಾನಂದ ಶೆಟ್ಟಿ, ಕೃಷ್ಣ ಮೊಯಿಲಿ, ಪ್ರಕಾಶ್, ಮಹೇಶ್, ಪ್ರಥ್ವಿರಾಜ್ ಜೈನ್, ಶಿವನಂದಾ, ಬಾಲಕೃಷ್ಣ, ಆನಂದ ಪೂಜಾರಿ, ಯಶೋಧಾ ಶೆಟ್ಟಿ, ರಿತೇಶ್ ಶೆಟ್ಟಿ, ಹರೀಶ್ ಪೂಜಾರಿ, ಶ್ರೀನಿವಾಸ ಭಂಡಾರಿ, ಪ್ರಭಾಕರ ಜೈನ್ ಮೊದಲಾದವರು ಉಪಸ್ಥಿತರಿದ್ದರು.
ಕಾರ್ಕಳ ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ್ ಜಿ.ನಾಯಕ್ ಸ್ವಾಗತಿಸಿದರು. ಶಿಕ್ಷಕರಾದ ದೇವದಸ ಕೆರೆಮನೆ, ರಂಜಿತಾ ಎಸ್ ನಿರೂಪಿಸಿದರು.