ಕಾಸರಗೋಡು, ಸೆ 05 (DaijiworldNews/SM): ದಾಖಲೆಗಳಿಲ್ಲದೆ ಸಾಗಾಟ ಮಾಡಲಾಗುತ್ತಿದ್ದ 60 ಲಕ್ಷ ರೂ. ವನ್ನು ಬೇಕಲ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಮೂವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಕಾರೊಂದರಲ್ಲಿ ಸಾಗಾಟ ಮಾಡುತ್ತಿದ್ದಾಗ ಪೊಲೀಸರಿಗೆ ಲಭಿಸಿದ ಖಚಿತ ಮಾಹಿತಿ ಯಂತೆ ಕಾರ್ಯಾಚರಣೆ ನಡೆಸಿ ಅಕ್ರಮ ಸಾಗಾಟ ಹಣವನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.