ಪುತ್ತೂರು, ಸೆ 06 (DaijiworldNews/MS): ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಮತ್ತಷ್ಟು ಚುರುಕುಗೊಳಿಸಿದ್ದಾರೆ.
ಎನ್ಐಎ ಅಧಿಕಾರಿಗಳ ತಂಡ ಸೆ.6ರಂದು ಬೆಳ್ಳಂಬೆಳಗ್ಗೆ ಪುತ್ತೂರು, ಸುಳ್ಯ ತಾಲೂಕಿನ ವಿವಿಧ ಕಡೆಗಳಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದೆ.
ಮನೆ, ಕೆಲ ಖಾಸಗಿ ಕಟ್ಟಡಗಳು ಸೇರಿದಂತೆ ಒಟ್ಟು 32 ಕಡೆಗಳಲ್ಲಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಆರೋಪಿಗಳು ಮತ್ತು ಆರೋಪಿಗಳಿಗೆ ಸಹಕರಿಸಿದವರ ವಿಚಾರಣೆ ನಡೆಯುತ್ತಿದ್ದು, ಎನ್ಐಎ ಅಧಿಕಾರಿಗಳ ತಂಡಕ್ಕೆ ರಾಜ್ಯ ಪೊಲೀಸರು ಸಹಕಾರ ನೀಡುತ್ತಿದ್ದಾರೆ ಎಂದು ತಿಳಿದುಬಂದಿದೆ.
ಜುಲೈ 26ರಂದು ಬಿಜೆಪಿ ಕಾರ್ಯಕರ್ತರ ಪ್ರವೀಣ್ ನೆಟ್ಟಾರು ಅವರನ್ನು ಮಾರಕಾಸ್ತ್ರದಿಂದ ದಾಳಿ ನಡೆಸಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು.