ಉಡುಪಿ, ಫೆ 06(SM): ರೈಲಿನಲ್ಲಿ ಭಟ್ಕಳದಿಂದ ಉಡುಪಿಗೆ ಡೀಸೆಲ್ ಸಾಗಾಟ ನಡೆಸುತ್ತಿದ್ದ ವ್ಯಕ್ತಿಯೊಬ್ಬನನ್ನು ರೈಲ್ವೇ ಪ್ರೊಟೆಕ್ಷನ್ ಪೋರ್ಸ್ನ ಅಧಿಕಾರಿಗಳು ಬಂಧಿಸಿದ್ದಾರೆ.
ರೈಲ್ವೇ ನಿಯಮಗಳ ಪ್ರಕಾರ ರೈಲಿನಲ್ಲಿ ಡೀಸೆಲ್ನಂತಹ ಅಪಾಯಕಾರಿ ವಸ್ತುಗಳನ್ನು ಸಾಗಾಟ ಮಾಡುವುದು ಶಿಕ್ಷಾರ್ಹವಾಗಿದೆ. ಈ ಹಿನ್ನೆಲೆ ವ್ಯಕ್ತಿಯನ್ನು ಬಂಧಿಸಿ, ಜಿಲ್ಲಾ ಸತ್ರ ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದು, ಶಿಕ್ಷೆ ವಿಧಿಸಲಾಗಿದೆ.
ಪ್ಯಾಸೆಂಜರ್ ರೈಲಿನಲ್ಲಿ ಡೀಸೆಲ್ನಂತಹ ಅಪಾಯಕಾರಿ ವಸ್ತುಗಳನ್ನು ಸಾಗಾಟ ನಡೆಸುವುದು ಅಪರಾಧ. ಇದರಿಂದ ಪ್ರಯಾಣಿಕರಿಗೂ ತೊಂದರೆ ಆಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಇಂತಹ ಅಪಾಯಕಾರಿ ವಸ್ತುಗಳನ್ನು ಪ್ಯಾಸೆಂಜರ್ ರೈಲಿನಲ್ಲಿ ಕೊಂಡು ಹೋಗದಂತೆ ರೈಲ್ವೇ ಪ್ರೊಟೆಕ್ಷನ್ ಫೋರ್ಸ್ನ ಇನ್ಸ್ ಪೆಕ್ಟರ್ ತಿಳಿಸಿದ್ದಾರೆ.