ಮಂಗಳೂರು, ಸೆ 06 (DaijiworldNews/SM): ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿ.ಎಂ-ಕಿಸಾನ್) ಯೋಜನೆಯಡಿ ಪರಿಹಾರ ಪಡೆಯಲು ರೈತರು ಕಡ್ಡಾಯವಾಗಿ ಇ-ಕೆವೈಸಿ ಮಾಡಿಕೊಳ್ಳಲು ಸಪ್ಟೆಂಬರ್ 7 ಕೊನೆಯ ದಿನವಾಗಿದೆ. ರೈತರು ಇ-ಕೆವೈಸಿ ಮಾಡಿಸದಿದ್ದಲ್ಲಿ ಆರ್ಥಿಕ ನೆರವು ಸ್ಥಗಿತಗೊಳ್ಳಲಿದೆ.
ಸ್ಮಾರ್ಟ್ ಫೋನ್ ಬಳಸುವ ರೈತರು ಅಧಿಕೃತ ಪೋರ್ಟಲ್ನ ಫಾರ್ಮರ್ಸ್ ಕೋರ್ನರ್ ನ ಇ-ಕೆವೈಸಿ ಅವಕಾಶದಡಿ ತಮ್ಮ ಆಧಾರ್ ಸಂಖ್ಯೆಯನ್ನು ಮತ್ತು ಮೊಬೈಲ್ ಸಂಖ್ಯೆಯನ್ನು ದಾಖಲಿಸಿ ಇ-ಕೆವೈಸಿ ಮಾಡಿಸಿಕೊಳ್ಳಬಹುದು.
ರೈತರು ನಾಗರಿಕ ಸೇವಾ ಕೇಂದ್ರ (ಸಿಎಸ್ಸಿ)/ ಗ್ರಾಮ ಒನ್ ಸೇವಾ ಕೇಂದ್ರದಲ್ಲಿಯೂ ಬಯೋಮೆಟ್ರಿಕ್ ಆಧಾರಿತವಾಗಿ ಇ-ಕೆವೈಸಿಯನ್ನು ಮಾಡಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ಹತ್ತಿರದ ಹೋಬಳಿಯ ರೈತ ಸಂಪರ್ಕ ಕೇಂದ್ರ ಮತ್ತು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.