ಮಂಗಳೂರು, ಸೆ 09 (DaijiworldNews/MS): ಮಂಗಳೂರು ಮಹಾನಗರ ಪಾಲಿಕೆಯ 23ನೇ ಅವಧಿಯ ಮೇಯರ್, ಉಪ ಮೇಯರ್ ಹಾಗೂ 4 ಸ್ಥಾಯಿ ಸಮಿತಿ ಸದಸ್ಯರ ಮಹತ್ವದ ಚುನಾವಣೆ ಇಂದು ನಡೆಯಲಿದೆ.
ಮೇಯರ್ ಗಾದಿ ಮತ್ತೆ ಸಾಮಾನ್ಯ ಅಭ್ಯರ್ಥಿಗೆ ಹಾಗೂ ಉಪ ಮೇಯರ್ ಸ್ಥಾನವು ಹಿಂದುಳಿದ ವರ್ಗ ಮಹಿಳೆಗೆ ಮೀಸಲಾಗಿರುವ ಕಾರಣ ಅದೃಷ್ಟ ಯಾರಿಗೆ ಒಲಿಯಲಿದೆ ಎಂಬುದು ಕುತೂಹಲ ಮೂಡಿಸಿದೆ.
ಅಂತಿಮ ಕ್ಷಣದ ಬದಲಾವಣೆ ಹೊರತುಪಡಿಸಿದರೆ ಬಿಜೆಪಿ ಹಿರಿಯ ಸದಸ್ಯ ಜಯಾನಂದ ಅಂಚನ್ ( ಕದ್ರಿ ಪದವು ವಾರ್ಡ್ ) ಅವರು ಹಾಗೂ ಉಪ ಮೇಯರ್ ಆಗಿ ಪೂರ್ಣಿಮಾ ಆಯ್ಕೆ ಆಗುವ ಸಾಧ್ಯತೆ ಇದೆ.
ಪಾಲಿಕೆಯ ಒಟ್ಟು 60 ಸ್ಥಾನಗಳ ಪೈಕಿ ಬಿಜೆಪಿ 44 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಮೊದಲ ಅವಧಿಯಲ್ಲಿ ಬಿಜೆಪಿಯ ದಿವಾಕರ್ ಪಾಂಡೇಶ್ವರ ಮೇಯರ್ ಗದ್ದುಗೆಗೇರಿದರೆ, ಎರಡನೇ ಅವಧಿಗೆ ಸಾಮಾನ್ಯ ಮೀಸಲು ನಿಗದಿಯಾದ ಕಾರಣ ಯಾವುದೇ ಜಿದ್ದಾಜಿದ್ದಿ ಇಲ್ಲದೆ ಹಿರಿಯ ಸದಸ್ಯ ಪ್ರೇಮಾನಂದ ಶೆಟ್ಟಿಗೆ ಮೇಯರ್ ಹುದ್ದೆ ಒಲಿದು ಬಂದಿತ್ತು.
ಅಭ್ಯರ್ಥಿ ಆಯ್ಕೆಗಾಗಿ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ , ಇಬ್ಬರು ಶಾಸಕರು, ನೇತೃತ್ವದಲ್ಲಿ ಪಾಲಿಕೆ ಬಿಜೆಪಿ ಸದಸ್ಯರ ಜತೆಗೆ ಮಹತ್ವದ ಸಭೆ ನಡೆಸಿ ವಿವಿಧ ಮುಖಂಡರು ತೀವ್ರ ಚರ್ಚೆ ನಡೆಸಿದ್ದರು.