ಸುಳ್ಯ, ಸೆ 10 (DaijiworldNews/MS): ಮದ್ರಸದಿಂದ ಮನೆಗೆ ತೆರಳುತ್ತಿದ್ದ ಬಾಲಕಿಗೆ ಬೈಕ್ ಢಿಕ್ಕಿಯಾಗಿ ಮೃತಪಟ್ಟ ದಾರುಣ ಘಟನೆ ಸುಳ್ಯದ ಅರಂಬೂರು ಬಳಿಯ ಪಾಲಡ್ಕ ಎಂಬಲ್ಲಿ ನಡೆದಿದೆ.
ಮೃತ ಬಾಲಕಿಯನ್ನು ಪಾಲಡ್ಕದ ರಶೀದ್ ಎಂಬವರ ಪುತ್ರಿ ಏಳು ವರ್ಷದ ರಿಫಾ ಎಂದುಗುರುತಿಸಲಾಗಿದೆ.
ಬಾಲಕಿ ರಿಫಾ ಸೆ. 10 ರ ಶನಿವಾರ ಬೆಳಿಗ್ಗೆ 8.45ರ ಸುಮಾರಿಗೆ ಅರಂಬೂರು ಮದ್ರಸಾದಿಂದ ಹಿಂತಿರುಗಿ ಪಾಲಡ್ಕದಲ್ಲಿ ಮನೆ ಕಡೆಗೆ ಹೋಗಲು ರಸ್ತೆ ದಾಟುತ್ತಿದ್ದಾಗ ಅರಂತೋಡು ಕಡೆಯಿಂದ ಸುಳ್ಯ ಕಡೆಗೆ ಬರುತ್ತದ್ದ ಬೈಕೊಂಡು ಢಿಕ್ಕಿ ಹೊಡೆದಿದೆ
ತಕ್ಷಣ ಬಾಲಕಿಯನ್ನು ಸ್ಥಳೀಯ ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ ಪ್ರಾಣ ಉಳಿಸಲಾಗಲಿಲ್ಲ ತಿಳಿದು ಬಂದಿದೆ.