ಉಡುಪಿ,ಸೆ 10 (DaijiworldNews/HR): ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷ ನ್ಯಾಯ ಮೂರ್ತಿ ವೀರಪ್ಪ ರವರು ಇಂದು ಉಡುಪಿ ಜಿಲ್ಲಾ ಆಸ್ಪತ್ರೆಗೆ ಧಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಉಡುಪಿ ಜಿಲ್ಲಾ ಪ್ರವಾಸದಲ್ಲಿರುವ ನ್ಯಾಯಮೂರ್ತಿಗಳು ಇಂದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಉಡುಪಿ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಆಸ್ಪತ್ರೆಯಲ್ಲಿ ನ ವ್ಯವಸ್ಥೆಗಳ ಕುರಿತು ಪರಿಶೀಲನೆ ನಡೆಸಿದರು. ಇದೇ ಸಂಧರ್ಭದಲ್ಲಿ ಆಸ್ಪತ್ರೆಯಲ್ಲಿನ ರೋಗಿಗಳ ಜೊತೆಗೆ ಕೂಡಾ ಸಂವಾದ ನಡೆಸಿದರು.
ಈ ಸಂಧರ್ಭದಲ್ಲಿ ಮಾತನಾಡಿದ ಅವರು "ಆಸ್ಪತ್ರೆ ಒಳ್ಳೆಯದಾಗಿ ನಿರ್ವಹಣೆ ಮಾಡಿದ್ದಾರೆ. ಕಟ್ಟಡ ಹಳೆಯದಾಗಿದೆ ಎಂಬ ದೂರು ಇದೆ. ಇದು ಈಗಾಗಲೇ ಉನ್ನತೀಕರಣಗೊಳ್ಳುತ್ತಿದೆ. ಸಾರ್ವಜನಿಕರು ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಇಲ್ಲಿನ ಆರೋಗ್ಯ ಸೇವೆಯನ್ನು ಬಳಸುವಂತೆ ಪ್ರೋತ್ಸಾಹಿಸಬೇಕು. ಜಿಲ್ಲೆಯಲ್ಲಿ ನಿರ್ಗತಿಕರ ಕೇಂದ್ರ ಇಲ್ಲ. ಇದರ ಕುರಿತಾಗಿ ಮಾಧ್ಯಮಗಳು ಬೆಳಕು ಚೆಲ್ಲಿ ಸರಕಾರದ ಗಮನ ಸೆಳೆಯ ಬೇಕು" ಎಂದರು.
ಈ ಸಂಧರ್ಭದಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶಾಂತವೀರ ಶಿವಪ್ಪ, ಜಿಲ್ಲಾ ಸರ್ಜನ್ ಮಧುಸೂಧನ್, ಸಾಮಾಜಿಕ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು ಮತ್ತಿತರರು ಉಪಸ್ಥಿತರಿದ್ದರು.