ಪುತ್ತೂರು, ಸೆ 11 (DaijiworldNews/HR): ಹಿಂದೂ ಕಾರ್ಯಕರ್ತನಿಗೆ ಜೀವ ಬೆದರಿಕೆ ಹಾಕಿದ ಆರೋಪದಲ್ಲಿ ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್ ನೆಟ್ಟಾರು ಹತ್ಯೆಯ ಆರೋಪಿಗಳಲ್ಲಿ ಒಬ್ಬನಾಗಿರುವ ಶಫೀಕ್ ಬೆಳ್ಳಾರೆಯ ಸಹೋದರನನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಸಫ್ರಿದ್ ಎಂದು ಗುರುತಿಸಲಾಗಿದೆ.
ಪ್ರಶಾಂತ್ ರೈ ಎಂಬವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಿಂದೂ ಕಾರ್ಯಕರ್ತ ಜೀವ ಬೆದರಿಕೆ ಹಾಕಿದ್ದು, ಈ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಬೆಳ್ಳಾರೆಯ ಪೊಲೀಸ್ ಠಾಣೆಯ ಎದುರು ಕ್ರಮಕ್ಕೆ ಆಗ್ರಹಿಸಿ ಹಿಂದೂ ಪರ ಕಾರ್ಯಕರ್ತರು ನೆರೆದಿದ್ದರು.
ಇನ್ನು ಸಫ್ರಿದ್ನನ್ನು ಬಜ್ಪೆಯಲ್ಲಿ ಪೊಲೀಸರು ಬಂಧಿಸಿದ್ದು, ಈತನನ್ನು ಬೆಳ್ಳಾರೆ ಠಾಣೆಗೆ ಕರೆತಂದಿರುವುದಾಗಿ ತಿಳಿದು ಬಂದಿದೆ.