ಮಂಗಳೂರು, ಸೆ 11 (DaijiworldNews/HR): ಅಕ್ರಮವಾಗಿ ಸಾಗಿಸುತ್ತಿದ್ದ 44.33 ಲಕ್ಷ ರೂ. ಮೌಲ್ಯದ 869 ಗ್ರಾಂ ಚಿನ್ನಾಭರಣವನ್ನು ನಗರದ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ಕಾಸರಗೋಡು ಮತ್ತು ಮಂಗಳೂರು ಮೂಲದ ನಾಲ್ವರು ಪುರುಷರು ಮತ್ತು ಒಬ್ಬ ಮಹಿಳೆ ಸೆಪ್ಟೆಂಬರ್ 6 ರಿಂದ 10 ರ ಅವಧಿಯಲ್ಲಿ ಅಕ್ರಮವಾಗಿ ಚಿನ್ನವನ್ನು ಸಾಗಿಸಲು ಪ್ರಯತ್ನಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ಯಾಂಟ್, ಒಳಉಡುಪು, ಶೂ ಮತ್ತು ಗುದನಾಳದಲ್ಲಿ ಪೇಸ್ಟ್ ರೂಪದಲ್ಲಿ ಚಿನ್ನವನ್ನು ಕಳ್ಳಸಾಗಣೆ ಮಾಡುತ್ತಿದ್ದಾಗ ಸಿಕ್ಕಿಬಿದ್ದಿದ್ದಾರೆ.