ಉಡುಪಿ, ಸೆ 15 (DaijiworldNews/MS): ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಹಿಂದೆಯೇ ಅಪಘಾತ ವಲಯ ಸ್ಥಳಗಳನ್ನು ಗುರುತಿಸಲಾಗಿದ್ದು , ಅಗತ್ಯವಿರುವ ವೈಜ್ಞಾನಿಕ ಕಾರ್ಯಗಳನ್ನು ಮತ್ತು ಮೇಲ್ದರ್ಜೆಗೇರಿಸುವ ಕಾಮಗಾರಿಗಳು ಆಗದೇ ಇರುವ ಬಗ್ಗೆ ರಸ್ತೆ ಸುರಕ್ಷತಾ ಸಮಿತಿಯ ಗಮನಕ್ಕೆ ತಂದ ಅವರು ಮುಂದಿನ ದಿನಗಳಲ್ಲಿ ಈ ಬಗ್ಗೆ ಕ್ರಮ ಕೈಗೊಳ್ಳದಿದ್ದಲ್ಲಿ ಅಂತಹ ಸ್ಥಳದಲ್ಲಿ ಅಪಘಾತಗಳು ನಡೆದಲ್ಲಿ ಸಂಬಂಧಿಸಿದ ಅಧಿಕಾರಿಗಳನ್ನು ಸಹ ಪ್ರಕರಣಗಳಲ್ಲಿ ಸಹ ಅಪರಾಧಿಗಳನ್ನಾಗಿಸುವುದಾಗಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ್ ಮಚೀಂದ್ರ ಎಚ್ಚರಿಕೆ ನೀಡಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಜನವರಿಯಿಂದ ಈವರೆಗೆ ರಸ್ತೆ ನಿಯಮಗಳ ಉಲ್ಲಂಘನೆಯ 42944 ಪ್ರಕರಣಗಳಲ್ಲಿ 1.96ಕೋಟಿ ಗೂ ಹೆಚ್ಚೂ ದಂಡವನ್ನು ಸಂಗ್ರಹಸಲಾಗಿದೆ ಎಂದ ಅವರು ವಾಹನ ಸವಾರರು ಸೀಲ್ ಬೆಲ್ಟ್, ಹೆಲ್ಮೆಟ್ ಸೇರಿದಂತೆ ಮತ್ತಿತರ ಸುರಕ್ಷತಾ ಸಾಧನಗಳನ್ನು ತಪ್ಪದೇ ಬಳಕೆ ಮಾಡಿಕೊಳ್ಳಬೇಕು ಇದರಿಂದ ಸುರಕ್ಷಿತವಾಗಿರಲು ಸಾಧ್ಯ ಎಂದರು.
ಸಭೆಯಲ್ಲಿ ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ರವಿಕುಮಾರ್, ಪ್ರಾದೇಶಿಕ ಸಾರಿಗೆ ಅಧಿಕಾರಿ ರವಿಶಂಕರ್, ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ್, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ , ರಾಷ್ಟಿçÃಯ ಹೆದ್ದಾರಿ ಅಭಿಯಂತರ ನಾಗರಾಜ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.