ಪುತ್ತೂರು, ಸೆ 15 (DaijiworldNews/HR): ತಿಂಗಳಾಡಿಯಲ್ಲಿ ಅಂಗಡಿಯೊಂದರಲ್ಲಿ ಸಾಮಾಗ್ರಿ ಖರೀದಿಸುತ್ತಿದ್ದ ಹಿಂದೂ ಮಹಿಳೆಗೆ ಅಂಗಡಿ ಮಾಲಕನಿಲ್ಲದ ಸಂದರ್ಭ ಲೈಂಗಿಕ ಕಿರುಕುಳ ನೀಡಿ ಪರಾರಿಯಾಗಿದ್ದ ಯುವಕನನ್ನು ಪುತ್ತೂರು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಆರೋಪಿಯನ್ನು ಬದ್ರುದ್ದೀನ್ ಎಂದು ಗುರುತಿಸಲಾಗಿದೆ.
ಸರ್ವೆ ನೇರೋಳ್ತಡ್ಕದ ಮಹಿಳೆಯೋರ್ವರು ಸೆ.14ರಂದು ಸಂಜೆ ತಿಂಗಳಾಡಿಯಲ್ಲಿರುವ ಸುಪರ್ ಬಝಾರ್ ಅಂಗಡಿಗೆ ಸಾಮಾನು ಖರೀದಿಸಲೆಂದು ಬಂದಿದ್ದು, ಅಂಗಡಿ ಮಾಲಕ ಹಮೀದ್ ಪಟ್ಟೆ ಚಹಾ ಕುಡಿಯಲೆಂದು ಹೊರಗಡೆ ಹೋಗಿದ್ದ ಸಂದರ್ಭ ಅಂಗಡಿಯಲ್ಲಿದ್ದ ಸೊರಕೆ ಓಲೆಮುಂಡೋವು ಸಮೀಪದ ಬದ್ರುದ್ದೀನ್ ಯಾನೆ ಬದ್ರು ಎಂಬಾತ ಮಹಿಳೆಯ ಮೈಮೇಲೆ ಕೈಹಾಕಿ ಲೈಂಗಿಕ ಕಿರುಕುಳ ನೀಡಿದ್ದ. ಈ ವೇಳೆ ಮಹಿಳೆ ಬೊಬ್ಬೆ ಹೊಡೆದ ಪರಿಣಾಮ ಅಲ್ಲಿ ಜನ ಸೇರಿದ್ದರಿಂದ ಆರೋಪಿ ಬದ್ರುದ್ದೀನ್ ಯಾನೆ ಬದ್ರು ಅಲ್ಲಿಂದ ಪರಾರಿಯಾಗಿದ್ದಾನೆ.
ಇನ್ನು ಘಟನೆ ಸುದ್ದಿಯಾಗುತ್ತಲೇ ಹಿಂದೂ ಸಂಘಟನೆಗಳ ನೇತೃತ್ವದಲ್ಲಿ ನೂರಾರು ಹಿಂದೂ ಯುವಕರು ಸ್ಥಳದಲ್ಲಿ ಜಮಾಯಿಸಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಆರೋಪಿಯನ್ನು ಕೂಡಲೇ ಬಂಧಿಸಬೇಕು ಎಂದು, ನೆರೆದವರು ಪೊಲೀಸರನ್ನು ಆಗ್ರಹಿಸಿದ್ದು ಇಂದು ಆರೋಪಿಯನ್ನು ಬಂಧಿಸಿದ್ದಾರೆ.