ಉಡುಪಿ, ಸೆ 15 (DaijiworldNews/DB): ಮಕ್ಕಳ ಕಳ್ಳತನದ ಬಗ್ಗೆ, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು, ಸುದ್ದಿಗಳನ್ನು ಹರಡುವವರ ಮೇಲೆ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಹಾಕೆ ಮಚಿಂದ್ರ ಎಚ್ಚರಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಮಕ್ಕಳ ಕಳ್ಳರು ಬಂದಿರುತ್ತಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಬಗ್ಗೆ ಸುಳ್ಳು ಸುದ್ದಿ ಹರಿದಾಡುತ್ತಿದ್ದು, ಈ ವಿಷಯಕ್ಕೆ ಸಂಬಂಧಿಸಿದಂತೆ ವಿವಿಧ ದೇಶದ/ರಾಜ್ಯದ ವಿಡಿಯೋಗಳನ್ನು ಪ್ರಕಟಿಸಲಾಗುತ್ತಿದೆ. ಇದರಿಂದ ಆತಂಕಗೊಂಡ ಸಾರ್ವಜನಿಕರು ಅಪರಿಚಿತ ಅಮಾಯಕ ವ್ಯಕ್ತಿಗಳನ್ನು ತಡೆದು ಹಲ್ಲೆ ಮಾಡುವ ಘಟನೆಗಳು ಬೆಳಕಿಗೆ ಬಂದಿರುತ್ತದೆ. ಇಂತಹ ಸುಳ್ಳು ಸುದ್ದಿಗಳನ್ನು ಹರಡುವವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಪ್ರಕಟಣೆ ಹೊರಡಿಸಿದ್ದಾರೆ.
ಸಾರ್ವಜನಿಕರು ತಮ್ಮ ನಗರ/ಗ್ರಾಮ/ ಮತ್ತು ಸುತ್ತುಮುತ್ತಲಿನ ಪ್ರದೇಶಗಳಲ್ಲಿ ಯಾವುದೇ ಸಂಶಯಾಸ್ಪದ ವ್ಯಕ್ತಿಗಳು ಕಂಡು ಬಂದಲ್ಲಿ ಕೂಡಲೇ 112 ಸಹಾಯವಾಣಿಗೆ ಕರೆ ಮಾಡುವುದು, ಇದರಿಂದ ಕೂಡಲೇ ಘಟನಾ ಸ್ಥಳಕ್ಕೆ ಪೊಲೀಸರು ಬಂದು ಕೂಲಂಕುಶವಾಗಿ ವಿಚಾರಣೆ ಮಾಡಿ ಸೂಕ್ತ ಕ್ರಮ ಕೈಗೊಳ್ಳುತ್ತಾರೆ ಎಂದವರು ತಿಳಿಸಿದ್ದಾರೆ.