ಮಂಗಳೂರು, ಸೆ 15 (DaijiworldNews/SM): ಪಡಿತರ ಚೀಟಿದಾರರ ವಿತರಿಸುವ ಅಕ್ಕಿಯಲ್ಲಿ ಕರಾವಳಿ ಜಿಲ್ಲೆಗಳಿಗೆ ಗುಣಮಟ್ಟದ ಕುಚ್ಚಲಕ್ಕಿಯನ್ನು ವಿತರಿಸುವಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಸಮ್ಮತಿಸಿದ್ದಾರೆ ಎಂದು ತಿಳಿದುಬಂದಿದೆ.
ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಇಂದು ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸಿದರು. ಸರಕಾರ ಕೈಗೊಂಡ ನಿರ್ಧಾರಕ್ಕೆ ಕೃತಜ್ಞತೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯ ಉಪಾಧ್ಯಕ್ಷರಾದ ನಿರ್ಮಲ್ ಕುಮಾರ್ ಸುರಾನಾ ಉಪಸ್ಥಿತರಿದ್ದರು.