ಮಂಗಳೂರು, ಸೆ 15 (DaijiworldNews/SM): ದ.ಕ.ಜಿಲ್ಲೆಯಲ್ಲಿ ಸಾಕಷ್ಟು ಸಂಚಲನ ಮೂಡಿಸಿದ ಫಾಝಿಲ್ ಹತ್ಯೆ ಪ್ರಕರಣದ ಆರೋಪಿ ಬಂಟ್ವಾಳದ ಹರ್ಷಿತ್ಗೆ ಮೂರನೇ ಜಿಲ್ಲಾ ಸತ್ರ ನ್ಯಾಯಾಲಯವು ಜಾಮೀನು ನೀಡಿದೆ.
ಜು.28ರಂದು ರಾತ್ರಿ ಸುರತ್ಕಲ್ ಜಂಕ್ಷನ್ನಲ್ಲಿದ್ದ ಫಾಝಿಲ್ನನ್ನು ತಂಡವೊಂದು ಕೊಲೆಗೈದಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹಲವು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು. ಈ ನಡುವೆ ಇದೀಗ ಆರೋಪಿ ಹರ್ಷಿತ್ಗೆ ನ್ಯಾಯಾಲಯವು ಸೆ.7ರಂದು ಜಾಮೀನು ಮಂಜೂರು ಮಾಡಿತ್ತು ಎಂದು ತಿಳಿದುಬಂದಿದೆ.
ಜುಲೈ 28ರಂದು ರಾತ್ರಿ ಮುಹಮ್ಮದ್ ಫಾಝಿಲ್ ಅವರು ಸುರತ್ಕಲ್ ನ ಮೂಡ ಮಾರುಕಟ್ಟೆಯಲ್ಲಿರುವ ಬಟ್ಟೆ ಮಳಿಗೆಯಲ್ಲಿ ಕೆಲಸ ಮಾಡುತ್ತಿದ್ದ ಸ್ನೇಹಿತನನ್ನು ಭೇಟಿ ಮಾಡಿ ಅಂಗಡಿಯಿಂದ ಹೊರಬರುತ್ತಿದ್ದಂತೆ ಕಾರಿನಲ್ಲಿ ಬಂದಿದ್ದ ದುಷ್ಕರ್ಮಿಗಳ ತಂಡ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೈಗೈದಿತ್ತು.