ಕಾಪು, ಸೆ 22 (DaijiworldNews/HR): ಪಿಎಫ್ಐ ಹಾಗೂ ಎಸ್ಡಿಪಿಐ ಕಚೇರಿ ಮೇಲೆ ಎನ್ಐಎ ಅಧಿಕಾರಿಗಳು ದಾಳಿ ಹಾಗೂ ಮುಖಂಡರ ಬಂಧನವನ್ನು ವಿರೋಧಿಸಿ ಪಿಎಫ್ಐ ಕಾರ್ಯಕರ್ತರು ರಾಷ್ಟ್ರೀಯ ಹೆದ್ದಾರಿ 66 ರ ಕಾಪುವಿನಲ್ಲಿ ರಸ್ತೆ ತಡೆ ನಡೆಸಿದರು.
ಯಾವುದೇ ರೀತಿಯಲ್ಲಿ ಪೊಲೀಸ್ ಅನುಮತಿ ಪಡೆಯದೆ ಹೆದ್ದಾರಿ ತಡೆ ನಡೆಸಿದ ಪಿಎಫ್ಐ ಜಿಲ್ಲಾಧ್ಯಕ್ಷ ಫಯಾಝ್ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇನ್ನು ಎನ್ಐಎ ದಾಳಿಗೆ ಹೆದರಿ ಪಿಎಫ್ಐ ಮುಖಂಡ ತಲೆಮರೆಸಿಕೊಂಡಿದ್ದು, ಆತನ ನಂಬರ್ ಲೊಕೇಶನ್ ಉಡುಪಿಯಲ್ಲಿ ಪತ್ತೆಯಾದ ಕಾರಣ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
ಇನ್ನು ಕಾಪು ವೃತ್ತ ನಿರೀಕ್ಷ ಕೆ.ಸಿ ಪೂವಯ್ಯ,ಕಾಪು ಎಸೈ ಶ್ರೀ ಶೈಲ ಮುರಗೋಡ ಹಾಗು ಸಿಬ್ಬಂದಿಗಳು ಸ್ಥಳದಲ್ಲಿ ಬಂದೊಬಸ್ತ್ ನಡೆಸಿದರು.