ಮಂಗಳೂರು, ಸೆ 23 (DaijiworldNews/SM): ಭಯೋತ್ಪಾದಕ ಸಂಘಟನೆಗಳ ಜೊತೆಗೆ ನಂಟು ಹೊಂದಿರುವ ಆರೋಪ ಮೇರೆಗೆ ಬಂಧಿತನಾಗಿರುವ ಮಾಝ್ ಅಹಮ್ಮದ್ ನ ತಂದೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಶಂಕಿತ ಆರೋಪಿ ಮಾಝ್ ಮುನೀರ್ ಅಹಮದ್ ಅವರ ತಂದೆ ಮುನೀರ್ ಅಹ್ಮದ್ ಮಂಗಳೂರಿನ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಸಂಜೆ 5 ಗಂಟೆಗೆ ನಿಧನರಾಗಿರುವುದಾಗಿ ವರದಿಯಾಗಿದೆ. ಮೃತ ಮುನೀರ್ ಅಹ್ಮದ್ರವರು ತೀರ್ಥಹಳ್ಳಿಯ ಮಾಜಿ ಪುರಸಭಾ ಸದಸ್ಯ ಕಾಂಗ್ರೆಸ್ ಮುಖಂಡ ದಿವಂಗತ ಸಾಬ್ಜಾನ್ ಸಾಹೇಬರವರ ಮಗನಾಗಿದ್ದರು. ಮೃತದೇಹವನ್ನು ರಾತ್ರಿ ತೀರ್ಥಹಳ್ಳಿಗೆ ತರಬಹುದೆಂದು ಕುಟುಂಬ ಮೂಲಗಳು ತಿಳಿಸಿವೆ.
ಮುನೀರ್ ಅಹಮ್ಮದ್ರವರ ಮನೆ ತೀರ್ಥಹಳ್ಳಿ ಮೀನು ಮಾರ್ಕೆಟ್ ಹತ್ತಿರ ಸೊಪ್ಪುಗುಡ್ಡೆ ಎಂಬಲ್ಲಿದ್ದರೂ, ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಮಗ್ಗುಲಿನಲ್ಲಿ ಮನೆ ಮಾಡಿ ನೆಲೆಸಿದ್ದರು ಎಂದು ತಿಳಿದುಬಂದಿದೆ.