ಉಡುಪಿ, ಸೆ 24 (DaijiworldNews/HR): ಪಿಎಫ್ಐ ಕಾರ್ಯಕರ್ತರನ್ನು ಕಾಂಗ್ರೆಸ್ ಸರಕಾರದ ಕಾಲದಲ್ಲಿ ಪೋಷಿಸಿದ್ದರು. ಆವತ್ತು ಪೋಷಿಸಿದ್ದರ ಪರಿಣಾಮವಾಗಿ ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ಸುಮಾರು 18 ಜನ ಕಾರ್ಯಕರ್ತರನ್ನು ನಾವು ಕಳೆದುಕೊಂಡಿದ್ದೇವೆ ಎಂದು ಸಚಿವ ಸುನಿಲ್ ಕುಮಾರ್ ಹೇಳಿದರು.
ಪಿಎಫ್ಐ, ಎಸ್ಡಿಪಿಐ ನಾಯಕರ ಮೇಲೆ ಎನ್ಐಎ ದಾಳಿ ಕುರಿತು ಪ್ರತಿಕ್ರಿಯಿಸಿದ ಸಚಿವರು "ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣ ಆದ ಸಂಧರ್ಭದಲ್ಲಿಯೇ ನಾನು ಹೇಳಿದ್ದೆ ಈ ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುತ್ತೇನೆ ಎಂದು. ಕಾರ್ಯಕರ್ತರಿಗೆ ನ್ಯಾಯವನ್ನು ಕೊಡಲು ನಾವು ಎಲ್ಲಾ ಹಂತದಲ್ಲಿ ಕೂಡಾ ಸಿದ್ದರಿದ್ದೇವೆ ಎಂಬುವುದನ್ನು ಹೇಳಿದ್ದೆ. ಅದರ ಪ್ರಕಾರ ತನಿಖೆಯನ್ನು ಎನ್ಐಎಗೆ ವಹಿಸಿದ್ದೆವು. ಈಗ ಎನ್ಐಎ ಬಹಳ ದೊಡ್ಡ ಮಟ್ಟದಲ್ಲಿ ತನಿಖೆ ಮಾಡುತ್ತಿದೆ. ಕಾಂಗ್ರೆಸ್ ಪೋಷಿಸಿದ್ದರ ಪರಿಣಾಮವಾಗಿ ಮತ್ತು ಅವರ ಮೇಲಿದ್ದ ಕೇಸ್ ಗಳನ್ನು ಹಿಂಪಡೆದ ಪರಿಣಾಮವಾಗಿ ಮತ್ತು ಹಿಂಸೆಯನ್ನು ಪ್ರಚೋದಿಸುವ ವ್ಯಕ್ತಿಗಳ ಜೊತೆಗೆ ಕಾಂಗ್ರೆಸ್ ಮತ್ತು ಅದರ ನಾಯಕರು ಸ್ನೇಹ ಸಂಪಾದಿಸಿದ ಪರಿಣಾಮವಾಗಿ ರಾಜ್ಯದಲ್ಲಿ ಅಶಾಂತಿ ವಾತಾವರಣ ಸೃಷ್ಟಿಯಾಗಿತ್ತು. ಇದು ಆಂತರಿಕ ಭದ್ರತೆಗೆ ದೊಡ್ಡ ಸವಾಲಾಗಿತ್ತು. ಎನ್ ಐ ಎ ಮುಖಾಂತರ ಇದನ್ನು ತನಿಖೆ ನಡೆಸಿ ಅಂತರಾಜ್ಯ ಮತ್ತು ಅಂತರಾಷ್ಟ್ರೀಯ ಸಂಪರ್ಕಗಳನ್ನು ಪತ್ತೆ ಹಚ್ಚಿ ಭಾರತದ ಭದ್ರತೆ ಯನ್ನು ಕಾಪಾಡಬೇಕು ಎಂಬುವುದು ನಮ್ಮ ಸ್ವಷ್ಟ ನಿಲುವಾಗಿತ್ತು. ಪಿಎಪ್ಐ ಅನ್ನು ಬಗ್ಗು ಬಡಿಯಲು ಎಲ್ಲಾ ರೀತಿಯ ಕ್ರಮಗಳನ್ನು ನಾವು ಕೈಗೊಳ್ಳುತ್ತೆವೆ. ಪಿಎಫ್ ಐ ಅವರ ಬಂದನ ಆದ ವಿವಿಧ ಸಂಧರ್ಭದಲ್ಲಿ ಆಪಾದಿತರು ಭಾರತವನ್ನು ಇಸ್ಲಾಂ ರಾಷ್ಟ್ರವನ್ನಾಗಿ ಮಾಡಬೇಕು ಎಂಬ ಕನಸುಗಳನ್ನು ಹೊಂದಿದ್ದರು ಎಂಬುವುದು ಕಂಡು ಬಂದಿದೆ. ಜಗತ್ತಿನ ಯಾವ ರಾಷ್ಟ್ರ ಗಳಿಗೂ ಕೂಡಾ ಭಾರತವನ್ನು ಇಸ್ಲಾಂ ರಾಷ್ಟ್ರ ವನ್ನಾಗಿ ಮಾಡಲು ಸಾಧ್ಯವಿಲ್ಲ. ಭಾರತ ಹಿಂದೂ ರಾಷ್ಟ್ರ ಇದೇ ಆಧಾರದಲ್ಲಿ ರಾಷ್ಟ್ರ ವನ್ನು ಬಲಿಷ್ಟ ಮಾಡುತ್ತೆವೆ" ಎಂದರು.
ಪೇ ಸಿಎಂ ಅಭಿಯಾನದ ಕುರಿತಾಗಿ ಪ್ರತಿಕ್ರಿಯಿಸಿದ ಸಚಿವ ಸುನಿಲ್ ಕುಮಾರ್, "ಕಾಂಗ್ರೆಸ್ ಭ್ರಷ್ಟಾಚಾರದ ವಿರುದ್ಧ ಆಧಾರ ರಹಿತ ಆರೋಪ ಮಾಡುತ್ತಿದೆ. ಪೇ ಸಿಎಂ ಎಂಬುದು ಕಾಂಗ್ರೆಸ್ನ ಸುಳ್ಳಿನ ಸುರಿಮಳೆ. ಪೋಸ್ಟರ್ ಅಂಟಿಸಿದ ಡಿಕೆಶಿ ಇಡಿ ಕಚೇರಿಗೆ ಹೋಗಿದ್ದು ಯಾಕೆ? ಈ ಪ್ರಶ್ನೆಗೆ ಸಿದ್ದರಾಮಯ್ಯ ಉತ್ತರ ಕೊಡಬೇಕು. ಭ್ರಷ್ಟಾಚಾರದ ಬಗ್ಗೆ ವಿಚಾರಣೆಗೆ ಒಳಗಾಗಿ ಪೇಸಿಎಂ ಪೋಸ್ಟರ್ ಅಳವಡಿಸುತ್ತಾರೆ. ಕಾಂಗ್ರೆಸಿಗೆ ಪೇ ಸಿಎಂ ಪೋಸ್ಟರ್ ಅಂಟಿಸಲು ಯಾವ ನೈತಿಕತೆ ಇದೆ. ಅರ್ಕಾವತಿ, ಇಂದಿರಾ ಕ್ಯಾಂಟೀನ್, ಹಾಸಿಗೆಯಲ್ಲಿ ಹಣ ನುಂಗಿದವರು ಕಾಂಗ್ರೆಸ್ಸಿಗರು. ಸಿದ್ದರಾಮಯ್ಯ ಭ್ರಷ್ಟಾಚಾರದ ಪಿತಾಮಹ. ಭ್ರಷ್ಟಾಚಾರದ ಉತ್ತುಂಗ ಏರಿಸಿದ ಕಾಂಗ್ರೆಸ್ಸಿಗರು ನಮ್ಮ ಕಾಮನ್ ಸಿಎಂ ಬಗ್ಗೆ ಮಾತನಾಡುತ್ತಾರೆ. ಭ್ರಷ್ಟಾಚಾರ ನಡೆದಿದ್ದರೆ ನ್ಯಾಯಾಲಯ ಮುಖ್ಯಮಂತ್ರಿಗಳು ಲೋಕಾಯುಕ್ತಕ್ಕೆ ದೂರು ಕೊಡಿ. 10 ದಿನದ ಅಧಿವೇಶನದಲ್ಲಿ ಭ್ರಷ್ಟಾಚಾರದ ಬಗ್ಗೆ ಒಂದು ದಿನವು ಚರ್ಚೆ ನಡೆದಿಲ್ಲ" ಎಂದರು.
ವಿದ್ಯುತ್ ದರ ಏರಿಕೆ ವಿಚಾರದ ಕುರಿತು ಮಾತನಾಡಿದ ಸಚಿವರು, "ವಿದ್ಯುತ್ ನ ಬಿಲ್ ಏರಿಕೆ ವರ್ಷಕ್ಕೆ ಒಂದು ಬಾರಿ ನಡೆಯುತ್ತದೆ. ಕಲ್ಲಿದ್ದಲು ಬೆಲೆ ಏರಿಕೆಗೆ ಹೊಂದಾಣಿಕೆ ಮಾಡಿ ವಿದ್ಯುತ್ ದರ ನಿಗದಿಯಾಗುತ್ತದೆ ಕಳೆದ 9 ವರ್ಷಗಳಿಂದ ಪ್ರತಿ ಮೂರು ತಿಂಗಳಿಗೊಮ್ಮೆ ಕಲ್ಲಿದ್ದಲು ದರ ನಿಗದಿಯಾಗುತ್ತದೆ. ಕಲ್ಲಿದ್ದಲು ಬೆಲೆ ಹೊಂದಾಣಿಕೆ ಗೋಸ್ಕರ ಬೆಲೆ ಏರಿಕೆ ಮಾಡಿದ್ದಾರೆ" ಎಂದರು.
ನಿಗದಿತ ಸಮಯದಲ್ಲಿ ಚುನಾವಣೆ ಆಗುತ್ತದೆ. ಬಿಜೆಪಿ ಮತ್ತೊಮ್ಮೆ ಸರ್ಕಾರವನ್ನು ರಚನೆ ಮಾಡುತ್ತದೆ. ಬೊಮ್ಮಾಯಿ ಅವರ ನೇತೃತ್ವದಲ್ಲಿ ಚುನಾವಣೆಗೆ ಹೋಗುತ್ತೇವೆ. ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಕೂಡ ಬಸವರಾಜ್ ಬೊಮ್ಮಾಯಿ. ಬೊಮ್ಮಾಯಿ ಮುಂದಿನ ಚುನಾವಣೆ ನೇತೃತ್ವ ವಹಿಸುತ್ತಾರೆ ಎಂದು ಜೆಪಿ ನಡ್ಡ ಅವರೇ ಹೇಳಿದ್ದಾರೆ. ನಾವೆಲ್ಲರೂ ಅದಕ್ಕೆ ಸಹಮತ ವ್ಯಕ್ತಪಡಿಸಿದ್ದೇವೆ ನಮ್ಮಲ್ಲಿ ಗೊಂದಲ ಇಲ್ಲ. ನಾವು ಸಾಮೂಹಿಕ ನಾಯಕತ್ವದಲ್ಲೇ ಚುನಾವಣೆಗೆ ಹೋಗುತ್ತೇವೆ. ನಮ್ಮ ಇವತ್ತಿನ ಕ್ಯಾಪ್ಟನ್ ಬಸವರಾಜ ಬೊಮ್ಮಾಯಿ. ಕ್ಯಾಪ್ಟನ್ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಹೋಗುತ್ತೇವೆ ಎಂದು ಹೇಳಿದ್ದಾರೆ.