ಮಂಗಳೂರು, ಸೆ 28 (DaijiworldNews/SM): ದೇಶ ವಿರೋಧಿ ಚಟುವಟಿಕೆ ಆರೋಪದ ಹಿನ್ನೆಲೆಯಲ್ಲಿ ರಾಷ್ಟ್ರವ್ಯಾಪಿ ಪಿಎಫ್ ಐ ಸಂಘಟನೆಯನ್ನು ಕೇಂದ್ರ ಗ್ರ್ಹ ಇಲಾಖೆ ನಿಷೇಧಿಸಿದ ಬೆನ್ನಲ್ಲೇ ಇದೀಗ ಮಂಗಳೂರಿನ ಪಿಎಫ್ ಐ ಕಚೇರಿಗೆ ಬೀಗ ಜಡಿಯಲಾಗಿದೆ.
ಮಂಗಳೂರಿನ ನೆಲ್ಲಿಕಾಯಿ ರಸ್ತೆಯಲ್ಲಿರುವ ಪಿಎಫ್ಐ ಕಚೇರಿ ಬಳಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಅವರು ಪರಿಶೀಲನೆ ನಡೆಸಿದ್ದಾರೆ. ಕಳೆದ ಎರಡು ದಿನಗಳಿಂದ ಪಿಎಫ್ ಐ ಕಚೇರಿಗೆ ಬೀಗ ಜಡಿಯಲಾಗಿದೆ. ಇದೀಗ ಬೀಗ ಒಡೆದು ಪೊಲೀಸರು ಒಳ ಪ್ರವೇಶಿಸಿ ತಪಾಸಣೆ ನಡೆಸಿದ್ದಾರೆ. ಅಗತ್ಯದ ದಾಖಲೆಗಳನ್ನು ಸಂಗ್ರಹಿಸಿದ ಬಳಿಕ ಇದೀಗ ಪಿಎಫ್ ಐ ಕಚೇರಿ ಸೀಲ್ ಮಾಡಲಾಗಿದೆ.
ಇಂದು ಮುಂಜಾನೆ ಇಲಾಖೆಗೆ ಸೂಚನೆ ಬಂದಿತ್ತು. ಕೇಂದ್ರ ಸರ್ಕಾರ ಪಿಎಫ್ಐ ಹಾಗೂ ಸಹ ಸಂಘಟನೆಗಳನ್ನು ಬ್ಯಾನ್ ಮಾಡಿದೆ. ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಸೂಚನೆ ನೀಡಿತ್ತು. ಸರ್ಕಾರ ಬ್ಯಾನ್ ಮಾಡಿರುವ ಸಂಘಟನೆಗಳ ಕಛೇರಿಗಳನ್ನು ಸೀಝ್ ಮಾಡಲು ಸೂಚನೆ ನೀಡಿತ್ತು. ಮಂಗಳೂರು ನಗರದ ಮೂರು ಉಪವಿಭಾಗದಲ್ಲಿ ಕಾರ್ಯಾಚರಣೆ ನಡೆಸುವ ಕಚೇರಿಗಳಿಗೆ ಬೀಗ ಜಡಿಯುವ ಜೊತೆಗೆ ಅಗತ್ಯ ದಾಖಲೆಗಳನ್ನು ಸಂಗ್ರಹಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ.