ಮಂಗಳೂರು, ಫೆ 11(SM): ಬೈಕಂಪಾಡಿಯ ಮೀನಕಳಿಯಾದಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಜುಗಾರಿ ಅಡ್ಡೆಗೆ ಮಂಗಳೂರು ಉತ್ತರ ವಿಭಾಗ ಹಾಗೂ ಪಣಂಬೂರು ಠಾಣಾ ಪೊಲೀಸರು ದಾಳಿ ನಡೆಸಿದ್ದಾರೆ. ಹಾಗೂ ಜೂಜು ನಿರತ 44 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ದಾಳಿ ವೇಳೆ ಜುಗಾರಿ ಆಟದಲ್ಲಿ ನಿರತರಾಗಿದ್ದ ಆರೋಪಿಗಳಿಂದ ಆಟಕ್ಕೆ ಬಳಸಿದ ನಗದು ಹಣ 75,870 ರೂಪಾಯಿಗಳನ್ನು ಹಾಗೂ ಇತರ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಇನ್ನು ಪ್ರಕರಣದ ಪತ್ತೆ ಕಾರ್ಯವನ್ನು ಮಂಗಳೂರು ಉತ್ತರ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಆರ್.ಶ್ರೀನಿವಾಸ ಗೌಡರವರ ನೇತೃತ್ವದಲ್ಲಿ ಪಣಂಬೂರು ಠಾಣಾ ಪಿ.ಐ ರಫೀಕ್ ಕೆ.ಎಮ್, ಪಿ.ಎಸ್.ಐ ಉಮೇಶ್ ಕುಮಾರ್.ಎಂ.ಎನ್ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದ್ದಾರೆ.