ಮಂಗಳೂರು, 29 (DaijiworldNews/DB): ವಿಶ್ವ ಹೃದಯ ದಿನ–2022ರ ಅಂಗವಾಗಿ ಸೈಕಲ್ ಜಾಥಾ, ಮಿಡಿತಕ್ಕಾಗಿ ತುಳಿತ ಹಾಗೂ ಹೃದಯಕ್ಕಾಗಿ ನಡಿಗೆ ಕಾಲ್ನಡಿಗೆ ಜಾಥಾ ಸೆಪ್ಟಂಬರ್ 29ರ ಗುರುವಾರ ಮಂಗಳೂರು ಮಹಾನಗರ ಪಾಲಿಕೆಯಿಂದ ಆರಂಭಗೊಂಡು ಪುರಭವನದಲ್ಲಿ ಸಂಪನ್ನಗೊಂಡಿತು.
ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ಕೆಎಂಸಿ ಆಸ್ಪತ್ರೆಯ ಹಿರಿಯ ಹೃದಯರೋಗ ತಜ್ಞ ಡಾ. ಪದ್ಮನಾಭ ಕಾಮತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕಿಶೋರ್ ಕುಮಾರ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಜಗದೀಶ್, ಜಿಲ್ಲಾ ಆರ್ಸಿಎಚ್ ಅಧಿಕಾರಿ ಡಾ. ರಾಜೇಶ್ ಬಿ.ವಿ., ಮಂಗಳೂರು ತಾಲೂಕು ಆರೋಗ್ಯಾಧಿಕಾರಿ ಡಾ. ಸುಜಯ್ ಕುಮಾರ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜ್ಯೋತಿ ಕೆ., ವಿಆರ್ ಸೈಕ್ಲಿಂಗ್ ಕ್ಲಬ್ನ ಅಧ್ಯಕ್ಷ ಸರ್ವೇಶ್ ಸಾಮಗ, ಮಂಗಳೂರು ಬೈಸಿಕಲ್ ಕ್ಲಬ್ ಅಧ್ಯಕ್ಷ ಅನಿಲ್ ಶೇರ್ ಭಾಗವಹಿಸಿದ್ದರು. ವಿದ್ಯಾರ್ಥಿಗಳು, ಹಿರಿಯ ನಾಗರಿಕರು, ಯುವಕ-ಯುವತಿಯರು ಪಾಲ್ಗೊಂಡರು.
ದ.ಕ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕ, ಜಿಲ್ಲಾ ವೆನ್ಲಾಕ್ ಆಸ್ಪತ್ರೆ, ಮಂಗಳೂರು ತಾಲೂಕು ಆರೋಗ್ಯಾಧಿಕಾರಿ ಕಚೇರಿ, ಮಂಗಳೂರು ಮಹಾನಗರ ಪಾಲಿಕೆ, ಮಂಗಳೂರು ಬೈಸಿಕಲ್ ಕ್ಲಬ್ ಹಾಗೂ ಮಂಗಳೂರಿನ ವಿಆರ್ ಸೈಕ್ಲಿಂಗ್ ಸಂಯುಕ್ತಾಶ್ರಯದಲ್ಲಿ ಜಾಥಾ ಹಮ್ಮಿಕೊಳ್ಳಲಾಯಿತು.