ಉಡುಪಿ, ಸೆ 30 (DaijiworldNews/MS): ಮುಂಬರುವ 2023ರ ವಿಧಾನಸಭೆ ಚುನಾವಣೆ ವೇಳೆಯಲ್ಲಿ ತಮ್ಮ ಹೆಸರು ’ಶೋಭಾ ಗೌಡ’ ಎಂದು ಬದಲಾಯಿಸಿಕೊಂಡು, ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಮಹತ್ವದ ಹುದ್ದೆ ಅಲಂಕರಿಸುತ್ತಾರೆ ಎಂಬ ವದಂತಿಗೆ ಪ್ರತಿಕ್ರಿಯಿಸಿರುವ ಸಚಿವೆ, ಇದೊಂದು ಸುಳ್ಳು ಸುದ್ದಿಯಾಗಿದ್ದು, ನನ್ನ ವಿರುದ್ಧ ಯಾರೋ ಷಡ್ಯಂತ್ರ ಮಾಡುತ್ತಿದ್ದಾರೆ ಹೆಸರು ಬದಲಾಯಿಸಲು ನನಗೆ ತಲೆ ಕೆಟ್ಟಿದ್ಯಾ? ಎಂದು ಕಿಡಿಕಾರಿದ್ದಾರೆ.
ಉಡುಪಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಸಚಿವೆ ಶೋಭಾ, ರಾಜಕಾರಣಿಗಳನ್ನ ಕೆಲವರು ಜೋಕರ್ ಎಂದುಕೊಂಡಿದ್ದಾರೆ. ನನ್ನ ಹೆಸರಿನ ಕುರಿತು
ಮಾಧ್ಯಮದಲ್ಲಿ ಚರ್ಚಿಸುವುದನ್ನು ,ಸಾಮಾಜಿಕ ,ರಾಜಕೀಯ ವಲಯ ಅಥವಾ ವಿರೋಧ ಪಕ್ಷದವರೇ ಇರಲಿ , ಅಪಪ್ರಚಾರ ಮಾಡುವುದನ್ನು ನಿಲ್ಲಿಸಿ. ಇದು ನನ್ನ ವಿನಮ್ರ ವಿನಂತಿ ಎಂದು ಹೇಳಿದ್ದಾರೆ. ನನ್ನ ಹೆಸರು ಬದಲಾವಣೆಯ ವದಂತಿ ಹರಡಿ , ಯಾಕೆ ಈ ಚರ್ಚೆ ಶುರುವಾಯಿತು ಗೊತ್ತಿಲ್ಲ. ಹೆಸರು ಬದಲಾಯಿಸಲು ನನಗೆ ತಲೆ ಕೆಟ್ಟಿದ್ಯಾ ಎಂದು ಖಡಕ್ ಆಗಿ ಪ್ರಶ್ನಿಸಿದರು.
2023ರ ವಿಧಾನಸಭಾ ಚುನಾವಣೆಗೆ ಮುನ್ನ ಒಕ್ಕಲಿಗ ಮತದಾರರನ್ನು ಒಲಿಸಿಕೊಳ್ಳಲು ಶೋಭಾ ಅವರ ಹೆಸರನ್ನು ಬದಲಾಯಿಸುವಂತೆ ದೆಹಲಿಯ ನಾಯಕರು ಸಲಹೆ ನೀಡಿದ್ದಾರೆ ಎಂಬ ವದಂತಿ ರಾಜಕೀಯ ವಲಯದಲ್ಲಿ ಕೇಳಿಬಂದಿತ್ತು