ಉಡುಪಿ, ಅ 02 (DaijiworldNews/SM): ರಾಜ್ಯದಲ್ಲಿ ವಿದ್ಯುತ್ ದರ ಏರಿಕೆ ಮಾಡಲಾಗಿದೆ. 2014ರಲ್ಲಿ ಕಲ್ಲಿದ್ದಲಿನ ಬೇರೆಯ ಹೊಂದಾಣಿಕೆ ಗೋಸ್ಕರ ನಿಯಮಾವಳಿ ರೂಪಿಸಲಾಗಿತ್ತು. ಹಿಂದಿನ ನಿಯಮಾವಳಿಯೇ ಮುಂದುವರಿಯುತ್ತಿದೆ. ಇದರಿಂದಾಗಿ ಬೆಲೆ ಏರಿಕೆಯಾಗುತ್ತಿದೆ. ನಮ್ಮ ಸರಕಾರ ಯಾವುದೇ ಹೊಸ ನಿಯಮಾವಳಿ ಮಾಡಿಲ್ಲ ಎಂದು ಇಂಧನ ಹಾಗೂ ಕನ್ನಡ ಸಂಸ್ಕೃತಿ ಸಚಿವ ಸುನೀಲ್ ಕುಮಾರ್ ತಿಳಿಸಿದ್ದಾರೆ.
ಈ ನಿಯಮಾವಳಿ ಬಗ್ಗೆ ಮರುಚಿಂತನೆ ಮಾಡಬೇಕು ಎಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದೇನೆ. ಮೂರು ತಿಂಗಳಿಗೊಮ್ಮೆ ದರ ಹೊಂದಾಣಿಕೆ ಮಾಡುವ ನಿಯಮದ ಬಗ್ಗೆ ಮರು ಚಿಂತನೆ ಮಾಡುತ್ತೇವೆ. ಗ್ರಾಹಕರಿಗೆ ರಾಜ್ಯದ ಜನತೆಗೆ ಹೊರೆಯಾಗುತ್ತಿದೆ ಎಂದು ನನಗೂ ಅನ್ನಿಸಿದೆ. ಕಾಂಗ್ರೆಸ್ ತಂದ ಈ ಪದ್ಧತಿಯಿಂದ ಜನರಿಗೆ ಹೊರೆಯಾಗುತ್ತಿದೆ. ಸಾಧಕ ಬಾದಕಗಳ ಕುರಿತು ಮುಖ್ಯಮಂತ್ರಿಗಳ ಜೊತೆ ಚರ್ಚಿಸುತ್ತೇನೆ. ಅಗತ್ಯ ಬಿದ್ದರೆ ಈ ನಿಯಮಾವಳಿ ಹಿಂದಕ್ಕೆ ಪಡೆಯಲು ಹಿಂಜರಿಯುವುದಿಲ್ಲ ಎಂದು ಸಚಿವ ಸುನಿಲ್ ಕುಮಾರ್ ತಿಳಿಸಿದ್ದಾರೆ.