ಬಂಟ್ವಾಳ,ಫೆ 13 (MSP): ಇಲ್ಲಿನ ಬಾಳ್ತಿಲ ಗ್ರಾಮದ ನೀರಪಾದೆ ಎಂಬಲ್ಲಿ ವಿವಾಹವಾಗುವುದಾಗಿ ಆಮಿಷ ಒಡ್ಡಿ ಯುವತಿಯನ್ನು ವಂಚಿಸಿ ಅತ್ಯಾಚಾರ ಎಸಗಿದ ಘಟನೆ ಫೆ.13ರ ಮಂಗಳವಾರ ಬೆಳಕಿಗೆ ಬಂದಿದೆ.
ಆರೋಪಿಯನ್ನು ಸ್ಥಳೀಯ ನೀರಪಾದೆ ನಿವಾಸಿ, ಕೂಲಿ ಕಾಮಿ೯ಕ ಸುಜಿತ್ ಪೂಜಾರಿ (24) ಎಂದು ಗುರುತಿಸಲಾಗಿದೆ.ಈತನು ಸ್ಥಳೀಯ 19ರ ಹರೆಯದ ಯುವತಿಯನ್ನು ವಿವಾಹವಾಗುವುದಾಗಿ ನಂಬಿಸಿ, ಎಂಟು ತಿಂಗಳಿನಿಂದ ಅತ್ಯಾಚಾರ ಎಸಗಿ ವಂಚಿಸಿದ್ದಾನೆ ಎಂದು ಆರೋಪಿಸಲಾಗಿದೆ.
ಈತನ ವಿರುದ್ಧ ಅತ್ಯಾಚಾರ ಮತ್ತು ಜಾತಿ ನಿಂದನೆ ಪ್ರಕರಣ ದಾಖಲಾಗಿದೆ ಎಂದು ಬಂಟ್ವಾಳ ನಗರ ಠಾಣೆ ಪೊಲೀಸರು ತಿಳಿಸಿದ್ದಾರೆ.