ಉಡುಪಿ,ಫೆ 13 (MSP): ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯೂ, ’ಆಪರೇಷನ್ ಕಮಲ ಆಡಿಯೋ ’ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹಾಗೂ ರಾಜ್ಯ ಬಿಜೆಪಿ ವಿರುದ್ದ ಉಡುಪಿ ಜಿಲ್ಲಾ ಹೆಚ್ಚುವರಿ ಪೋಲಿಸ್ ಅಧೀಕ್ಷಕ ದೂರು ಸಲ್ಲಿಸಿದೆ.
ಆಡಿಯೋ ಟೇಪ್ನಲ್ಲಿ ಅಸಂವಿಧಾನಿಕವಾಗಿ ಶಾಸಕರನ್ನು ತಲಾ 10 ಕೋಟಿ ಕೊಟ್ಟು ಖರೀದಿಸುತ್ತೇವೆ ಎಂದು ಹಾಗೂ ರಾಜ್ಯದ ಗೌರವಾನ್ವಿತ ವಿಧಾನಸಭಾ ಸಭಾಧ್ಯಕ್ಷರ ಹೆಸರು ಮತ್ತು ದೇಶದ ಪ್ರಧಾನಿ ಹಾಗೂ ಬಿಜೆಪಿ ಪಕ್ಷದ ರಾಷ್ಟ್ರಧ್ಯಕ್ಷರ ಹೆಸರನ್ನು ಪ್ರಸ್ತಾಪಿಸಿ ರಾಜ್ಯದ ನಾಗರಿಕರಲ್ಲಿ ಗೊಂದಲವನ್ನು ಉಂಟು ಮಾಡಿದ್ದಾರೆ ಎಂದು ಆರೋಪಿಸಿ, ಕ್ರಮಕ್ಕಾಗಿ ಒತ್ತಾಯಿಸಿ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ವಿಶ್ವಾಸ್ ವಿ. ಅಮೀನ್ ಉಡುಪಿ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರ್ಚಂದ್ರ ಅವರಿಗೆ ಮನವಿ ಸಲ್ಲಿಸಿದರು.
ಸಂದರ್ಭದಲ್ಲಿ ಪ್ರಶಾಂತ್ ಪೂಜಾರಿ, ದೀಪಕ್ ಕೋಟ್ಯಾನ್, ಶೇಖರ್ ಪೂಜಾರಿ, ಜೋಯಲ್ ಮಥಾಯಸ್, ದಿನೇಶ್ ನಾಯಕ್, ಹರೀಶ್ ಪೂಜಾರಿ, ಮಣಿಕಂಠ, ಸುರೇಶ್ ಪೂಜಾರಿ ಉಪಸ್ಥಿತರಿದ್ದರು.